ಭಟ್ಕಳ: ‘ಶಾಂತಿ, ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು’ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಹೇಶ ಜೆ. ಹೇಳಿದರು.

ತಾಲ್ಲೂಕು ಆಡಳಿತ ಸೌಧದಲ್ಲಿ ಈಚೆಗೆ ನಡೆದ ಬಕ್ರೀದ್ ಅಂಗವಾಗಿ ಶಾಂತಿ ಸಭೆಯಲ್ಲಿ ಮಾತನಾಡಿದರು.

‘ತಾಲ್ಲೂಕು ಆಡಳಿತ ನೀಡುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಆಚರಿಸಬೇಕು. ಮೇ.30ರವರೆಗೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ಬಂದ್ ಮಾಡುವುದಲ್ಲದೇ, ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾಳಜಿ ವಹಿಸಲಾಗುವುದು’ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕೃಷ್ಣಮೂರ್ತಿ ಮಾತನಾಡಿ, ‘ಯಾವುದೇ ಅಹಿತಕರ ಘಟನೆ ನಡೆಯದಂತೆ ಹಬ್ಬ ಆಚರಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಗಮನಕ್ಕೆ ತಂದಲ್ಲಿ ಸೂಕ್ತ ಪರಿಹಾರ ಕೈಗೊಳ್ಳಲಾಗುವುದು’ ಎಂದರು.

ತಂಜಿಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡಿ ಬಕ್ರೀದ್ ಆಚರಿಸಲಿದ್ದೇವೆ. ಮಳೆ ಬಂದಲ್ಲಿ ಮಸೀದಿಗಳಲ್ಲೇ ಪ್ರಾರ್ಥನೆ ಮಾಡುತ್ತೇವೆ. ತಾಲ್ಲೂಕಿನಲ್ಲಿ ಪದೇ ಪದೇ ಕರೆಂಟ್ ಹೋಗುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ. ಇದಕ್ಕೆ ಹೆಸ್ಕಾಂ ಇಲಾಖೆ ಗಮನ ಕೊಡಬೇಕು’ ಎಂದು ತಿಳಿಸಿದರು.

ಸಿಪಿಐ ದಿವಾಕರ್ ಎಂ., ಮಾತನಾಡಿ, ‘ ಸುಳ್ಳು, ಪ್ರಚೋದನಕಾರಿ ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಹೆಬಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೈಯದ್ ಅಲಿ, ‘ಹೆಬಳೆ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ಹೊರ ರಾಜ್ಯಗಳಿಂದ ಬಂದ ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲೇ ಮದ್ಯಪಾನ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ದೂರಿದರು.

ಡಿವೈಎಸ್ಪಿ ಮಹೇಶ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ನಗರಸಭೆ ಪೌರಾಯುಕ್ತ ಬಾಬಾಸಾಹೇಬ್ ಮಾನೆ, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಹೆಸ್ಕಾಂ ಎಇಇ ಮಂಜುನಾಥ, ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-20-1715915366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.