ಭಟ್ಕಳ: ಮೂರಿನಕಟ್ಟೆ ಧ್ವಂಸ ಮಾಡಿದವರ ಮೇಲೆ ಕ್ರಮ ಕೈಗೊಳ್ಳಿ ಎಂದು ಮನವಿ ನೀಡಲು ಹೋದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಸರ್ಕಾರ ಕೇಸ್ ದಾಖಲು ಮಾಡಿರುವುದು ದುರ್ದೈವದ ಸಂಗತಿ ಎಂದು ಉತ್ತರ ಕನ್ನಡ ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎನ್.ಎಸ್. ಹೆಗಡೆ ಹೇಳಿದರು.

ಅವರು ಮಂಗಳವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮೂರಿನಕಟ್ಟೆ ಹಿಂದೂಗಳ ಶ್ರದ್ದಾಕೇಂದ್ರವಾಗಿದೆ. ಇದನ್ನು ಅಲ್ಲಿಯೇ ಮರುಸ್ಥಾಪಿಸಬೇಕು. ಹಿಂದೂಗಳ ಮೇಲೆ ಹಾಕಿರುವ ಕೇಸ್ ವಾಪಾಸ್ ಪಡೆಯಬೇಕು. ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದವನನ್ನು ಬಂಧಿಸಬೇಕು ಹಾಗೂ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು ಅಲ್ಲಿ ಸಾವಿರಾರು ಜನರನ್ನು ಸೇರಿಸಿದ ಎಲ್ಲರನ್ನೂ ಬಂಧಿಸಬೇಕು ಎಂದು ಆಗ್ರಹಿಸಿ ಮೇ 29ರಂದು ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಮೇ 29ರಂದು ಬೆಳಿಗ್ಗೆ 10 ಘಂಟೆಗೆ ಪಟ್ಟಣದ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ಮೈದಾನದಲ್ಲಿ ಕಾರ್ಯಕರ್ತರೆಲ್ಲಾ ಬೃಹತ್ ಸಂಖ್ಯೆಯಲ್ಲಿ ಸೇರಿ ಅಲ್ಲಿಂದ ಮೆರವಣಿಗೆಯ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ಮನವಿ ಅರ್ಪಿಸಲಾಗುವುದು ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿನಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕೇಸ್ ದಾಖಲು ಮಾಡಲಾಗುತ್ತಿದೆ. ಒಂದು ಕೋಮಿನ ಓಲೈಕೆಗಾಗಿ ಕಾಂಗ್ರೆಸ್ ಇದನ್ನು ಮುಂದುವರೆಸುತ್ತಿದೆ. ಇದರ ಬಗ್ಗೆ ಬಿಜೆಪಿ ಮುಂದಿನ ದಿನಗಳಲಿ ತಕ್ಕ ಉತ್ತರ ನೀಡಲಿದೆ ಎಂದರು.

ಮೆರೆವಣಿಗೆಯಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ರಾಜ್ಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಾಜಿ ಶಾಸಕ ಸುನೀಲ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ, ಮಂಡಳ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಶಿವಾನಿ ಶಾಂತರಾಂ, ಸುಬ್ರಾಯ ದೇವಾಡಿಗ, ಭಾಸ್ಕರ ದೈಮನೆ, ಶ್ರೀಕಾಂತ ನಾಯ್ಕ, ಕೇದಾರ ಕೊಲ್ಲೆ, ಶ್ರೀನಿವಾಸ ನಾಯ್ಕ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-2115257795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.