ಭಟ್ಕಳ: ತಾಲ್ಲೂಕಿನ ವೆಂಕ್ಚಾಪುರ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.

ಹಾವೇರಿ ಮೂಲದ ಬೀಮಪ್ಪ ಹನುಮಂತಪ್ಪ ಗಣಜೂರು ಚಾಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಭಟ್ಕಳದಿಂದ ಹೊನ್ನಾವರ ಕಡೆಗೆ ಅತೀ ವೇಗವಾಗಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಲಭಾಗಕ್ಕೆ ಹೋಗಿ ಎದುರಿನಿಂದ ಬರುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಮೊಹಮ್ಮದ್ ಮುಶಾಫರ್ (26), ಫೌಜಿಯಾ ಮೊಹಮ್ಮದ್ ಅಶ್ರಫ್ (29), ಮೊಹಮ್ಮದ್ ಅಶ್ರಫ್ ಇಸ್ಮಾಯಿಲ್ (34), ಅಬ್ದುಲ್ ಖಾದರ್ ಅಜ್ವಲ್ (21) ಹಾಗೂ ಮೊಹಮ್ಮದ್ ಅಸ್ಥಾನ್ (19) ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ಗೆ ಕರೆ ಮಾಡಿದರೂ ವಿಳಂಬವಾಗಿದ್ದರಿಂದ ಹೆದ್ದಾರಿ ಪೊಲೀಸ್ ಗಸ್ತು ವಾಹನದಲ್ಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ: ಪಟ್ಟಣದ ಮಾರುತಿನಗರದ ಬಳಿ ಕಂಟೇನರ್ ವಾಹನ ಹಿಂಬಾಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ತಲಗೋಡ ಕೋಟೆಮನೆ ನಿವಾಸಿ ಹರ್ಷ ಮಂಜುನಾಥ ನಾಯ್ಕ (21) ದೂರು ನೀಡಿದ್ದು, ಸುಲ್ತಾನ್ ಸ್ಟ್ರೀಟ್ನ ಇದ್ರಿಸ್ ಅಬ್ಬಾಸ್ ರೊಡ್ಡಾ, ಉಸ್ಮಾನ್ ಸ್ಟ್ರೀಟ್ನ ಅಮಾನ್ ಹಕೀಂ ಮೊತೇಶ್ಯಾಮ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬುಧವಾರ ಮಧ್ಯರಾತ್ರಿ ಹರ್ಷ ಅವರು ಸ್ನೇಹಿತರಾದ ಮಧುರ ಮಂಜುನಾಥ ನಾಯ್ಕ ಮತ್ತು ಸಚಿನ್ ಗೋವಿಂದ ನಾಯ್ಕ ಅವರೊಂದಿಗೆ ಬೈಕ್ನಲ್ಲಿ ಸಬ್ಬತ್ತಿಯಿಂದ ಭಟ್ಕಳದ ಕಡೆಗೆ ಕಂಟೇನರ್ ವಾಹನದ ಹಿಂದೆ ಸಾಗುತ್ತಿದ್ದ ವೇಳೆ ಮಾರುತಿನಗರದ ರಾಘವೇಂದ್ರ ಮಠದ ಸಮೀಪದ ಮಾರುತಿ ಸುಜುಕಿ ಶೋರೂಂ ಬಳಿ ಎರಡು ಬೈಕ್ಗಳಲ್ಲಿ ಬಂದ ಆರೋಪಿಗಳು ಇವರನ್ನು ನಿಲ್ಲಿಸಿ, ಕಂಟೇನರ್ ಯಾಕೆ ಹಿಂಬಾಲಿಸುತ್ತಿದ್ದೀರಿ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹರ್ಷ ಹಾಗೂ ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜೊತೆಯಲಿದ್ದ ಸಚಿನ್ ಅವರ ಶರ್ಟ್ ಹರಿದು ಹಾಕಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಹರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-20-1412893976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.