ಭಟ್ಕಳ: ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ವತಿಯಿಂದ ಜಾಗೃತಿ ಹಾಗೂ ಅಣಕು ಪ್ರದರ್ಶನ ನಡೆಯಿತು.

ವಿಪತ್ತು ಸಂಭವಿಸಿದ ಸಂದರ್ಭಗಳಲ್ಲಿ ಎಚ್ಚರಿಕೆ ವಹಿಸುವುದು ಹಾಗೂ ತುರ್ತು ಪರಿಸ್ಥಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ದೇವರಾಜ್ ಇಕೇರಿ ಮಾತನಾಡಿ, ‘ಪ್ರಾಕೃತಿಕ ವಿಕೋಪಗಳು, ರಸ್ತೆ ಅಪಘಾತಗಳು, ಸಿಡಿಲು ಬಡಿತ ಸೇರಿದಂತೆ ವಿವಿಧ ಅನಾಹುತಗಳ ಸಂದರ್ಭಗಳಲ್ಲಿ ಜನರು ತಾವೇ ರಕ್ಷಿಸಿಕೊಳ್ಳುವ ಕುರಿತು ಮೂಲಭೂತ ಜ್ಞಾನ ಹೊಂದಿರುವುದು ಅಗತ್ಯ. ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಅಣಕು ಪ್ರದರ್ಶನದಲ್ಲಿ ಪ್ರವಾಹ, ಸುನಾಮಿ, ಭೂಕಂಪ ಸೇರಿದಂತೆ ವಿವಿಧ ಅನಾಹುತಗಳಲ್ಲಿ ಸಿಕ್ಕಿ ಹಾಕಿಕೊಂಡವರ ರಕ್ಷಣೆ ವಿಧಾನಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಹೃದಯಾಘಾತದ ಸಂದರ್ಭಗಳಲ್ಲಿ ನೀಡಬಹುದಾದ ಪ್ರಾಥಮಿಕ ಚಿಕಿತ್ಸೆಯ ಪ್ರಾತ್ಯಕ್ಷಿಕೆಯನ್ನೂ ತಂಡ ಪ್ರದರ್ಶಿಸಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮೇಜರ್ ದುರ್ಗ ಪ್ರಸಾದ್, ಕಮಾಂಡರ್ ಕೃಷ್ಣಕುಮಾರ್, ಸಜೀವನ್, ಕುಮಾರ್ ಜಿ.ಎನ್., ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ನಾಯ್ಕ, ತೋಟಗಾರಿಕೆ ಸಹಾಯಕ ನಿರ್ದೇಶಕ ಶ್ರವಣಕುಮಾರ, ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಪ್ರಭಾರಿ ಪಿಡಿಒ ಚಂದ್ರಶೇಖರ ಇಟಗಿ, ಕಾರ್ಯದರ್ಶಿ ಮಂಜುನಾಥ ಶೆಟ್ಟಿ ಮನೆ, ಕಂದಾಯ ನಿರೀಕ್ಷಕ ವಿಶ್ವನಾಥ ಗಾಂಕರ, ಗ್ರಾಮ ಆಡಳಿತಾಧಿಕಾರಿ ಸಭಾನ ಬಾನು, ಶೇಷಗಿರಿ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-133848119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.