ಭಟ್ಕಳ: ಅಖಿಲ ಹವ್ಯಕ ಮಹಾಸಭಾದ ಬೆಳಕೆ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತ್ಯುತ್ಸವ ಮತ್ತು ಹವ್ಯಕ ಭವನ ಲೋಕಾರ್ಪಣೆ ಮೇ 1 ಮತ್ತು 2ರಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಹವ್ಯಕ ಮಹಾಸಭಾದ ಕಾರ್ಯದರ್ಶಿ ಪ್ರಶಾಂತ ಭಟ್ಟ ಹೇಳಿದರು.

ಅವರು ಮಂಗಳವಾರ ಸಂಜೆ ಬೆಳಕೆ ದುರ್ಗಾಪರಮೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿದರು.

ಮೇ1ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ 2ರಂದು ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ನೂತನ ಸಭಾಭವನ ಉದ್ಘಾಟಿಸಲಿದ್ದಾರೆ. ಅಂದು ಮಧ್ಯಾಹ್ನ 11.30ಕ್ಕೆ ಧರ್ಮ ಸಭೆ ನಡೆಯಲಿದ್ದು, ಸಚಿವ ಮಂಕಾಳ ಎಸ್. ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ ನಾಯ್ಕ, ಭೂಮಿ ದಾನ ನೀಡಿದ ಮಂಜುನಾಥ ಬಿಲ್ಲವ ಪಾಲ್ಗೊಳ್ಳಲಿದ್ದಾರೆ. ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ ಅಧ್ಯಕ್ಷತೆ ವಹಿಸುವರು. ಬೆಳಕೆ, ಗೊರ್ಟೆ ಮತ್ತಿತರ ಭಾಗದ ಜನತೆಗೆ ಅನುಕೂಲವಾಗಲಿ ಎನ್ನುವ ಸದಾಶಯದೊಂದಿಗೆ ₹ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಸಭಾಭವನ ನಿರ್ಮಿಸಲಾಗಿದೆ. ಸ್ಥಳೀಯರಿಗೆ ಮದುವೆ, ಉಪನಯನ, ನಾಮಕರಣ ಮುಂತಾದ ಶುಭಕಾರ್ಯಗಳಿಗೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಲು ಅನುಕೂಲವಾಗಲಿದೆ. ಬೆಳಕೆ ದುರ್ಗಾಪರಮೇಶ್ವರಿ ದೇವಸ್ಥಾನ ಸ್ವಚ್ಛ ಹಾಗೂ ಸುಂದರ ಪರಿಸರದಲ್ಲಿದ್ದು, ಜನತೆಗೆ ಅನುಕೂಲವಾಗಲು ಇದೀಗ 600 ಜನರ ಆಸನ ಸಾಮರ್ಥ್ಯ ಇರುವ ಸಭಾಭವನ ನಿರ್ಮಿಸಲಾಗಿದೆ. ಏಕಕಾಲದಲ್ಲಿ 200 ಜನ ಸಾಮರ್ಥ್ಯದ ಭೋಜನಾಲಯ, 1,000 ಜನ ಸಾಮರ್ಥ್ಯದ ಅಡುಗೆ ಮನೆ ಮತ್ತು ಪರಿಕರಗಳು, ಸುಸಜ್ಜಿತವಾದ ವಾಹನ ನಿಲುಗಡೆ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು. ಮುಂದೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಹವ್ಯಕ ಮಹಾಸಭಾ ಚಿಂತನೆ ನಡೆಸಿದ್ದು, ಸ್ಥಳೀಯರ ಸಹಕಾರ ಅಗತ್ಯ ಎಂದರು.

ಬೆಳಕೆ ದುರ್ಗಾಪರಮೇಶ್ವರ ದೇವಸ್ಥಾನದ ಸಂಚಾಲಕ ನಾಗರಾಜ ಮಧ್ಯಸ್ಥ, ಅರ್ಚಕ ಸುಮಂತ ಭಟ್ಟ, ವಿಶ್ವನಾಥ ಭಟ್ಟ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-20-951859153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.