ಭಟ್ಕಳ: ರಮ್ಜಾನ್ ಅಂಗವಾಗಿ ನಗರದ ಬಂದರ್ ರಸ್ತೆಯಲ್ಲಿ ಹಾಕಲಾಗಿದ್ದ ಬಾವುಟವನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಘಟನೆಗೆ ಸಂಬಂಧಿಸಿ ಹೊಸ ತಿರುವು ಸಿಕ್ಕಿದೆ.

‘ಬಾವುಟ ತೆರವುಗೊಳಿಸಿದ ಬಳಿಕ, ಕೆಲ ಕಿಡಿಗೇಡಿಗಳು ಮತ್ತೆ ಅದೇ ಸ್ಥಳದಲ್ಲಿ ಕಾನೂನು ಮೀರಿ ಬಾವುಟ ಹಾರಿಸಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ಮೇಲೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡರು ನಗರಸಭೆಯ ಆಯುಕ್ತರ ಅನುಪಸ್ಥಿತಿಯಲ್ಲಿ ಕಚೇರಿ ಅಧಿಕಾರಿಗಳಿಗೆ ಆಗ್ರಹಿಸಿದರು.

ಇದೇ ವೇಳೆ, ಜಾಲಿಯ ದೇವಿನಗರದ ನಾಮಫಲಕ ವಿಚಾರದಲ್ಲಿ ಕಾರ್ಯಕರ್ತರ ಮೇಲೆ ಮೊಕದ್ದಮೆ ದಾಖಲಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಇದೇ ರೀತಿಯ ಕ್ರಮವನ್ನು ಈ ಪ್ರಕರಣದಲ್ಲೂ ಅನುಸರಿಸಬೇಕು ಎಂದು ಒತ್ತಾಯಿಸಿದರು.

ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಯಂತ್ ನಾಯ್ಕ್, ಸಹಸಂಚಾಲಕ ನಾಗೇಶ್ ಹೊನ್ನೆಗದ್ದೆ, ಕುಮಾರ್ ನಾಯ್ಕ್, ಪಶ್ಚಿಮಘಟ್ಟ ಅಭಿವೃದ್ಧಿ ವೇದಿಕೆ ಮಾಜಿ ಅಧ್ಯಕ್ಷ ಗೋವಿಂದ್ ನಾಯ್ಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಈಶ್ವರ್ ನಾಯ್ಕ್, ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ್, ಆರ್ಟಿಐ ಕಾರ್ಯಕರ್ತ ನಾಗೇಂದ್ರ ನಾಯ್ಕ್, ರಾಜೇಂದ್ರ ನಾಯ್ಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-20-1835687128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.