ಭಟ್ಕಳ: ರಂಜಾನ್ ಹಿನ್ನೆಲೆಯಲ್ಲಿ ಪಟ್ಟಣದ ಬಂದರ್ ರಸ್ತೆಯಲ್ಲಿ ಹಾಕಲಾಗಿದ್ದ ಇಸ್ಲಾಮಿಕ್ ಬಾವುಟವನ್ನು ಶನಿವಾರ ಪುರಸಭೆಯವರು ತೆರವುಗೊಳಿಸಿದ ಬಗ್ಗೆ ಸ್ಥಳೀಯ ಮುಸ್ಲಿಂ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 19ರಂದು ಸುಮಾರು 20ರಿಂದ 25 ಅಡಿ ಉದ್ದದ ಕಬ್ಬಿಣದ ಪೈಪ್ ಸ್ಥಾಪಿಸಿ, ಹಸಿರು ಬಣ್ಣದ ಉರ್ದು ಲಿಪಿಯ ಬರಹ ಹಾಗೂ ಖಡ್ಗದ ಚಿಹ್ನೆ ಹೊಂದಿದ್ದ ಬಾವುಟವನ್ನು ಹಾರಿಸಲಾಗಿತ್ತು. ಪುರಸಭೆ ಮುಖ್ಯಾಧಿಕಾರಿ ಬಾಬಾಸಾಹೇಬ್ ಮಾಣೆ ಅವರ ನೇತೃತ್ವದಲ್ಲಿ, ಪೊಲೀಸ್ ಭದ್ರತೆಯಲ್ಲಿ ಬಾವುಟ ತೆರವುಗೊಳಿಸಲಾಯಿತು.

ಮುಸ್ಲಿಂ ಯುವಕರು ಪುರಸಭೆಯ ಮಾಜಿ ಉಪಾಧ್ಯಕ್ಷ ಅಲ್ತಾಫ್ ಕರೂರಿ ಅವರ ನೇತೃತ್ವದಲ್ಲಿ ಸ್ಥಳಕ್ಕೆ ಆಗಮಿಸಿ ಮತ್ತೆ ಅದೇ ಸ್ಥಳದಲ್ಲಿ ಬಾವುಟ ಹಾರಿಸಲು ಯತ್ನಿಸಿದರು. ಪೊಲೀಸರು ಅದನ್ನು ತಡೆದು, ಬಾವುಟವನ್ನು ಮತ್ತೆ ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ಅವರು ಬಂದರ ರಸ್ತೆ ಬಂದ್ ಮಾಡಲು ಯತ್ನಿಸಿದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟರು.

ಬಳಿಕ ಡಿಎಸ್ಪಿ ಕಚೇರಿಯಲ್ಲಿ ಮುಸ್ಲಿಂ ಮುಖಂಡರ ಸಭೆ ನಡೆಸಿದ ಬಳಿಕ ತಾತ್ಕಾಲಿಕವಾಗಿ ಬಾವುಟವನ್ನು ಹಾಕಿ ಸ್ವಲ್ಪ ಸಮಯದ ಬಳಿಕ ತಾವೇ ತೆರವುಗೊಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-1697936589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.