ಭಟ್ಕಳ: ತಾಲ್ಲೂಕಿನ ಗೊಂಡ ಬುಡಕಟ್ಟಿನ ಜನರಿಗೆ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡುವಲ್ಲಿ ಆಗುತ್ತಿರುವ ತೊಂದರೆ ನಿವಾರಿಸುವಂತೆ ಆಗ್ರಹಿಸಿ ಗೊಂಡ ಸಮುದಾಯವರು ಮಂಗಳವಾರ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಕುರಿತು ಭಟ್ಕಳ ಉಪವಿಭಾಗಾಧಿಕಾರಿ ಜೆ. ಮಹೇಶ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಗೊಂಡ ಸಮುದಾಯದ ಮುಖಂಡ ಮಂಜುನಾಥ ಗೊಂಡ, ‘ಇತ್ತೀಚಿನ ದಿನಗಳಲ್ಲಿ ‘ಗೊಂಡ’ ಮತ್ತು ‘ಗೊಂಡ್’ ಎಂಬ ಹೆಸರಿನ ವ್ಯತ್ಯಾಸದ ಕಾರಣ ಜಾತಿ ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡಲು ತೊಂದರೆ ಉಂಟಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸ್ಪಷ್ಟೀಕರಣ ಆದೇಶದಲ್ಲಿ ‘ಗೊಂಡ’ ಹಾಗೂ ‘ಗೊಂಡ್’ ಎರಡೂ ಒಂದೇ ಎಂಬುದಾಗಿ ತಿಳಿಸಿದ್ದರೂ, ತಹಶೀಲ್ದಾರ್ ಕಚೇರಿಯಿಂದ ಪ್ರಮಾಣಪತ್ರ ನೀಡಲು ನಿರಾಕರಿಸಲಾಗುತ್ತಿದೆ’ ಎಂದರು.

‘1950ರಲ್ಲಿ ಹೊರಡಿಸಿದ ಆದೇಶದಲ್ಲಿ ಗೊಂಡ ಬುಡಕಟ್ಟಿನ ಜನರಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಲಾಗಿದೆ. 1956ರ ಡಿಸೆಂಬರ್ 10ರಂದು ಮೈಸೂರು ಸರ್ಕಾರ ಹೊರಡಿಸಿದ ಗಜೆಟ್ ಪ್ರಕಟಣೆಯಲ್ಲೂ ಉತ್ತರ ಕನ್ನಡ ಜಿಲ್ಲೆಯ ಗೊಂಡ ಬುಡಕಟ್ಟಿನವರು ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಉಲ್ಲೇಖಿಸಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.

‘ತಾಲ್ಲೂಕಿನಲ್ಲಿ 15 ಸಾವಿರಕ್ಕೂ ಅಧಿಕ ಗೊಂಡ ಬುಡಕಟ್ಟು ಜನರು ವಾಸವಿದ್ದಾರೆ. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಬಹುತೇಕರು ಗುಡ್ಡಗಾಡು ಪ್ರದೇಶಗಳಲ್ಲೇ ವಾಸವಿದ್ದು, ತಮ್ಮದೇ ಆದ ಆಚರಣೆ, ಸಂಪ್ರದಾಯ ಹಾಗೂ ಧಾರ್ಮಿಕ ವಿಧಿ–ವಿಧಾನಗಳನ್ನು ತಲೆಮಾರುಗಳಿಂದ ಪಾಲಿಸಿಕೊಂಡು ಬರುತ್ತಿದ್ದಾರೆ’ ಎಂದರು.

‘ಗೊಂಡ ಬುಡಕಟ್ಟು ಸಮುದಾಯವು ಭಟ್ಕಳ ತಾಲ್ಲೂಕು ಸೇರಿದಂತೆ ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದವರೆಗೂ ವಿಸ್ತರಿಸಿದೆ. ಜಾತಿಗೊಂಡ, ಸೀಮೆಗೊಂಡ, ಒಕ್ಕೂಟಗೊಂಡ ಹಾಗೂ ಊರಿನಗೊಂಡ ಎಂಬ ವಿವಿಧ ಪಂಗಡಗಳಿದ್ದು, ಮುಖಂಡ ವ್ಯವಸ್ಥೆಯ ಮೂಲಕ ಸಮಾಜ ಸಾಗುತ್ತಿದೆ’ ಎಂದು ಹೇಳಿದರು.

ಭಟ್ಕಳ ಉಪವಿಭಾಗಾಧಿಕಾರಿ ಅನುಪಸ್ಥಿತಿಯಲ್ಲಿ ಶಿರಸ್ತೇದಾರ ಪ್ರವೀಣ ಮನವಿ ಸ್ವೀಕರಿಸಿದರು. ಗೊಂಡ ಸಮುದಾಯದ ಸಾವಿರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-1183765660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.