ಭಟ್ಕಳ: ಶಿಕ್ಷಕರ ದಶಕದ ಬೇಡಿಕೆಯಾದ ಗುರುಭವನ ನಿರ್ಮಾಣಕ್ಕೆ ಸರ್ಕಾರ ಅನುದಾನ ಒದಗಿಸಿದ್ದು, ಶನಿವಾರ ಬೆಳಿಗ್ಗೆ 9.30ಕ್ಕೆಶಿಲಾನ್ಯಾಸ ಕಾರ್ಯಕ್ರಮ ಇಲ್ಲಿ ನಡೆಯಲಿದೆ.

ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ಗುರು ಸುಧೀಂದ್ರ ಕಾಲೇಜಿನ ಎದುರು ಗುರುಭವನ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಾರವಾರ ಬಿಟ್ಟರೆ ಭಟ್ಕಳದಲ್ಲಿ ಮಾತ್ರ ಗುರುಭವನ ನಿರ್ಮಾಣಕ್ಕೆ ಅನುದಾನ ಬಂದಿರುವುದು ಶಿಕ್ಷಕರ ಹರ್ಷವನ್ನು ಇಮ್ಮಡಿಗೊಳಿಸಿದೆ.

‘ದಶಕದಿಂದ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಾಗರ ರಸ್ತೆಯಲ್ಲಿರುವ ಸರ್ಕಾರಿ ಹಾಡಿ ಜಾಗವನ್ನು ಶಿಕ್ಷಕರ ಸಂಘದ ಹೆಸರಿಗೆ ಮಂಜೂರು ಮಾಡಿಸಿಕೊಂಡು ಗುರುಭವನ ನಿರ್ಮಾಣಕ್ಕೆ ಪ್ರಯತ್ನ ನಡೆಸುತ್ತ ಬಂದಿದ್ದರು. ಪ್ರಯತ್ನ ಕೈಗೂಡಿರಲಿಲ್ಲ. ಸಚಿವಮಂಕಾಳ ವೈದ್ಯ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಶಿಕ್ಷಣ ಸಚಿವರ ಜೊತೆ ಸಮನ್ವಯ ಸಾಧಿಸಿ ಗುರುಭವನ ನಿರ್ಮಾಣಕ್ಕೆ ₹5 ಕೋಟಿ ಅನುದಾನ ತರುವಲ್ಲಿ ಸಫಲರಾಗಿದ್ದಾರೆ.ಮೂರು ಮಹಡಿಯಸುಸಜ್ಜಿತ ಭವನ ಕಟ್ಟಲು ನೀಲನಕ್ಷೆ ತಯಾರಿಸಲಾಗಿದ್ದು, ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಮುಗಿಸುವ ಯೋಜನೆ ಇದೆ’ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್.ನಾಯ್ಕ ತಿಳಿಸಿದ್ದಾರೆ.

‘ಸಚಿವ ಮಂಕಾಳ ವೈದ್ಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಲಿದ್ದು, ಬಳಿಕ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಕಳೆದ ಬಾರಿಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚೂ ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳನ್ನು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಗುವುದು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-20-124943808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.