ಭಟ್ಕಳ: ಭಟ್ಕಳದ ಹೆದ್ದಾರಿ ಸಮಸ್ಯೆ ಕುರಿತಂತೆ ಗುರುವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.

ಆರಂಭದಲ್ಲಿ ಹೆದ್ದಾರಿ ಭೂ ಸ್ವಾಧೀನದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ, ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಭೂಸ್ವಾಧೀನ ಅಡ್ಡಿಯಾದರೆ ಕೂಡಲೆ ಇತ್ಯರ್ಥಪಡಿಸುವಂತೆ ಉಪವಿಭಾಗಾಧಿಕಾರಿ ಜೆ.ಮಹೇಶ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಐಆರ್ಬಿ ಅಧಿಕಾರಿಗಳು, ‘ಕೊಟೇಶ್ವರ ಕ್ರಾಸ್ ಬಳಿ ಪೌರಕಾರ್ಮಿಕ ಕಾಲೊನಿಯವರು ಪರಿಹಾರ ಹಣ ನೀಡಿಲ್ಲ ಎನ್ನುವ ಕಾರಣಕ್ಕೆ ಜಾಗ ಬಿಟ್ಟುಕೊಟ್ಟಿಲ್ಲ ಇದರಿಂದಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ’ ಎಂದರು.

ನಗರಸಭೆ ಪೌರಾಯುಕ್ತ ಬಾಬಾ ಸಾಹೇಬ ಮಾನೆ ಅವರಿಗೆ ಜಾಗ ಖಾಲಿಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ರಸ್ತೆ ಕಾಮಗಾರಿಯ ಪ್ರಗತಿ ಹಾಗೂ ಮಳೆಗಾಲದ ನೀರು ಹರಿಯುವ ಚರಂಡಿಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಹೆದ್ದಾರಿಯಲ್ಲಿ ನಿಂತ ನೀರು ಯಾವ ನದಿ ಸೇರಲಿದೆ ಎಂದು ಪ್ರಶ್ನಿಸಿದರು. ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು. ಸಂಚಾರಕ್ಕೆ ಅಡಚಣೆಯಾಗದಂತೆ, ಅಪಘಾತಗಳು ಸಂಭವಿಸದಂತೆ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸಿ ಸಂಚಾರಿಗಳಿಗೆ ಸೂಕ್ತ ಮಾಹಿತಿ ನೀಡಬೇಕು’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಐ.ಆರ್.ಬಿ ಕಂಪನಿ ಅಧಿಕಾರಿಗಳು, ‘ಹೆದ್ದಾರಿಯಲ್ಲಿ ನೀರು ಹರಿದು ಹೋಗಲು ಚರಂಡಿ ನಿರ್ಮಿಸುತ್ತಿದ್ದಾರೆ. ಆದರೆ ಅದರ ಹೋರ ಹರಿವಿನ ಬಗ್ಗೆ ಎಲ್ಲೂ ಮಾಹಿತಿ ಇಲ್ಲ. ಪಟ್ಟಣದ ಸಂಶುದ್ದೀನ್ ಸರ್ಕಲ್ ಬಳಿಯಿಂದ ಬಂದರು ರಸ್ತೆವರೆಗೆ ಬೃಹದಾಕಾರದ ಚರಂಡಿ ನಿರ್ಮಿಸಿ ಡಾರಂಟಾ ಬಳಿ ಕಲ್ವರ್ಟ್ ಮೂಲಕ ಶರಾಬಿ ನದಿಗೆ ನೀರು ಹರಿದು ಹೋಗುವಂತೆ ಮಾಡಲು ಅವಕಾಶ ಇದೆ’ ಎಂದರು.

ಈ ಬಗ್ಗೆ ಪುರಸಭೆಯಿಂದ ನೀಲನಕ್ಷೆ ರೂಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಭಟ್ಕಳ ಉಪವಿಭಾಗಾಧಿಕಾರಿ ಜೆ ಮಹೇಶ, ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ಭಟ್ಕಳ ಡಿವೈಎಸ್ಪಿ ಬಿ.ಗಿರೀಶ, ಹೆದ್ದಾರಿ ಯೋಜನಾಧಿಕಾರಿ ಕೆ.ಶಿವಕುಮಾರ್, ಐಆರ್ಬಿ ಎಂಜಿನಿಯರ್ ಸುದೇಶ, ಪುರಸಭೆ ಎಂಜಿನಿಯರ್ ಅರವಿಂದ್, ವೆಂಕಟೇಶ ನಾವುಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-1613910585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.