ಭಟ್ಕಳ: ಭಟ್ಕಳದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ವೀಕ್ಷಣೆಗೆ ಬಂದಿದ್ದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಸಮ್ಮುಖದಲ್ಲಿ ಗುರುವಾರ ಸಾರ್ವಜನಿಕರು ಹೆದ್ದಾರಿ ಪ್ರಾಧಿಕಾರದ ಹಾಗೂ ಐಆರ್ಬಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮೂಡಭಟ್ಕಳ ಬೈಪಾಸ್ ಬಳಿ ಅಂಡರ್ ಪಾಸ್ ಕಾಮಗಾರಿ ಪಡೆದುಕೊಂಡ ಗುತ್ತಿಗೆದಾರನನ್ನುತರಾಟೆಗೆ ತೆಗೆದುಕೊಂಡ ಸಚಿವ ಮಂಕಾಳ ವೈದ್ಯ, ‘ಇನ್ನೇಷ್ಟು ವರ್ಷಬೇಕು ಕಾಮಗಾರಿ ಮುಗಿಸಲು, ಇನ್ನೇಷ್ಟು ಜನರ ಹೆಣ ಇಲ್ಲಿ ಬೀಳಬೇಕು?’ ಎಂದು ಖಾರವಾಗಿ ಪ್ರಶ್ನಿಸಿದರು.

ಈ ವೇಳೆ ಭಟ್ಕಳ ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಸತೀಶಕುಮಾರ ನಾಯ್ಕ ಮಾತನಾಡಿ, ‘ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಯವರು ಕೆಲಸ ಆರಂಭಿಸುವ ಮುನ್ನ ಮಳೆಗಾಲದ ನೀರು ಹರಿದು ಹೋಗಲು ಚರಂಡಿ ಹಾಗೂ ಸರ್ವಿಸ್ ರಸ್ತೆ ಮಾಡುವ ಭರವಸೆ ನೀಡಿದ್ದರು. ಆದರೆ ಈಗ ಆ ಕಾಮಗಾರಿಯನ್ನು ಅರ್ಧಕ್ಕೆ ಕೈಬಿಟ್ಟು ತರಾತುರಿಯಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದಾರೆ. ಮೇ17ಕ್ಕೆ ಮಾನ್ಸೂನ್ ಮುನ್ಸೂಚನೆ ಇದ್ದು, ಮಳೆ ಆರಂಭವಾದರೆ ಭಟ್ಕಳ ಸಂಪೂರ್ಣ ಮುಳುಗಡೆಯಾಗಲಿದೆ. ಇದಕ್ಕೆ ಒಂದು ಪರಿಹಾರ ಕಂಡುಕೊಳ್ಳದಿದ್ದಲಿ ಹೆದ್ದಾರಿ ಕಾಮಗಾರಿ ಮುಂದುವರೆಸಲು ನಾವು ಅವಕಾಶ ನೀಡುವುದಿಲ್ಲ’ ಎಂದರು.

ತಂಝೀಂ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಮಾತನಾಡಿ, ‘ಮಣ್ಣಿನ ಗುಡ್ಡ ಅಗೆದು ತೆಗೆದು ರಸ್ತೆ ಮಾಡಲಾಗುತ್ತಿದೆ. ಇದು ಜೇಡಿಮಣ್ಣಾಗಿದ್ದು, ಮಳೆಗಾಲದಲ್ಲಿ ರಸ್ತೆ ಕುಸಿಯುವ ಸಾಧ್ಯತೆ ಹೆಚ್ಚಿದೆ. ಮಳೆಗಾಲದಲ್ಲಿ ಈ ಮಣ್ಣು ನೀರಿನ ಜೊತೆ ಬಂದು ರಸ್ತೆಯ ಮೇಲೆ ನಿಲ್ಲುವ ಕಾರಣ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುವ ಸಾಧ್ಯತೆಯಿದೆ’ ಎಂದರು.

ತಂಝೀ ಕಾರ್ಯದರ್ಶಿ ಅಬ್ದುರ್ ರಕೀಬ್ ಮಾತನಾಡಿ, ‘ರಂಗಿನಕಟ್ಟೆ ಹಾಗೂ ಸರ್ಕಲ್ ಬಳಿ ರಸ್ತೆ ಏರಿಸಲಾಗಿದೆ. ಇದರಿಂದಾಗಿ ರಸ್ತೆಯ ಅಕ್ಕಪಕ್ಕದ ಅಂಗಡಿಕಾರರು ತಿಂಗಳಿನಿಂದ ವ್ಯಾಪಾರವಿಲ್ಲದೆ ಖಾಲಿ ಕೂತಿದ್ದಾರೆ. ಮಳೆ ಬಂದರೆ ಮುಳುಗಡೆಯಾಗುವ ಭೀತಿಯಲ್ಲಿದ್ದಾರೆ. ಇವರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಿತ್ಯ ಈ ಪ್ರದೇಶ ಅಪಘಾತ ತಾಣವಾಗಿ ಮಾರ್ಪಟ್ಟಿದೆ’ ಎಂದು ದೂರಿದರು.

ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ., ಮಳೆಗಾಲದಲ್ಲಿ ನೀರು ನಿಲ್ಲದಂತೆ ನದಿಗೆ ಹರಿದು ಹೋಗಲು ತುರ್ತು ಕಾಲುವೆ ನಿರ್ಮಿಸುವಂತೆ ಸೂಚಿಸಿದರು. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಐ.ಆರ್.ಬಿಯವರಿಗೆ ಸೂಚಿಸಿದ ನಂತರ ಕೊಟೇಶ್ವರ ಕಾಲೊನಿ ಬಳಿ ಜಾಗ ತೆರವು ಮಾಡಿಕೊಡುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.

ಹೆದ್ದಾರಿ ನೀರು ಹೋರಹರಿವಿನ ಬಗ್ಗೆ ನೀಲನಕ್ಷೆ ರೂಪಿಸಿ ಕಾಮಗಾರಿಗೆ ಅನುಮೋದನೆ ಪಡೆದು ಕೆಲಸ ಆರಂಭಿಸುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಪುರಸಭೆಯ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಭಟ್ಕಳ ಉಪವಿಭಾಗಾಧಿಕಾರಿ ಜೆ ಮಹೇಶ, ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ಭಟ್ಕಳ ಡಿವೈಎಸ್ಪಿ ಬಿ.ಗಿರೀಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಹೆದ್ದಾರಿ ಯೋಜನಾಧಿಕಾರಿ ಶ್ರೀನಿವಾಸ, ಐಆರ್ಬಿ ಎಂಜಿನಿಯರ್ ಸುದೇಶ, ಪುರಸಭೆ ಎಂಜಿನಿಯರ್ ಅರವಿಂದ್, ವೆಂಕಟೇಶ ನಾವುಡ, ರಾಜೇಶ ನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-1907930071

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.