ಭಟ್ಕಳ: ತಾಲ್ಲೂಕಿನ ವಿವಿಧೆಡೆ ಸೋಮವಾರ ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರವಾನಗಿ, ಪ್ರಮಾಣ ಪತ್ರ ಹಾಜರು ಪಡಿಸದ ಮೂರು ಕ್ಲಿನಿಕ್ಗಳಿಗೆ ಬೀಗಮುದ್ರೆ ಹಾಕಿದರು.

ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮಾರ್ಗದರ್ಶನದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸನಾ ಪಟೇಲ್ ನೇತೃತ್ವದ ತಂಡವು ನಗರದ ವಿವಿಧ ಸ್ಥಳಗಳಲ್ಲಿ ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿತು. ಪಟ್ಟಣದಲ್ಲಿ ನಾಲ್ಕು ಕ್ಲಿನಿಕ್ಗಳನ್ನು ಹಾಗೂ ಶಿರಾಲಿಯಲ್ಲಿನ ಒಂದು ಕ್ಲಿನಿಕ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.

'ಕ್ಲಿನಿಕ್ಗಳಲ್ಲಿ ವೈದ್ಯರು ಹೊಂದಿರುವ ವೈದ್ಯಕೀಯ ಪ್ರಮಾಣ ಪತ್ರವನ್ನು ಪರಿಶೀಲಿಸಲಾಗಿದ್ದು ಯಾವುದೇ ಪ್ರಮಾಣ ಪತ್ರ ಹಾಜರು ಮಾಡದ ಮೂರು ಕ್ಲಿನಿಕ್ಗಳಿಗೆ ಬೀಗಮುದ್ರೆ ಹಾಕಲಾಗಿದೆ. ಮದೀನಾ ಕಾಲೊನಿಯಲ್ಲಿರುವ ಒಂದು ಕ್ಲಿನಿಕ್ನ್ನು ಬಂದ್ ಮಾಡಲಾಗಿದ್ದು ಕ್ಲಿನಿಕ್ನ ಶೆಟರ್ ಮೇಲೆ ನೋಟಿಸ್ ಅಂಟಿಸಲಾಗಿದೆ' ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸನಾ ಪಟೇಲ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-20-591065909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.