ಭಟ್ಕಳ: ತಾಲ್ಲೂಕಿನ ಕೋಣಾರದ ವಸತಿ ಪ್ರದೇಶದಲ್ಲಿನ ಸಿಸಿಟಿವಿಯಲ್ಲಿ ಎರಡು ಚಿರತೆಗಳು ಓಡಾಡಿದ ದ್ಯಶ್ಯ ಶನಿವಾರ ಸೆರೆಯಾಗಿದ್ದು ಜನತೆ ತೀವ್ರ ಆತಂಕಕ್ಕೆ ಈಡಾಗಿದ್ದಾರೆ.

ಶನಿವಾರ ರಾತ್ರಿ 11ಗಂಟೆ ಸುಮಾರಿಗೆ ಕೋಣಾರದ ಮಂಜುನಾಥ ಹೆಬ್ಬಾರ್ ಅವರ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯದಲ್ಲಿ 2 ರಿಂದ 3 ವರ್ಷ ವಯಸ್ಸಿನ ಎರಡು ಚಿರತೆಗಳು ನಡೆದುಕೊಂಡು ಬರುತ್ತಿರುವ ನೋಟ ದಾಖಲಾಗಿದೆ. ಇದನ್ನು ಕಂಡ ಮನೆಯವರು ಗಾಬರಿಯಾಗಿದ್ದು ಸುದ್ದಿ ತಿಳಿಯುತ್ತಲೇ ಗ್ರಾಮಸ್ಥರು ಜಾಗೃತರಾಗಿದ್ದಾರೆ.

ತಮ್ಮ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಂಜೆಯ ನಂತರ ಓಡಾಡುವುದಕ್ಕೂ ಹೆದರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

’ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆಯ ಓಡಾಟವನ್ನು ಇಲಾಖೆಯೂ ಕೂಡಾ ಗಮನಿಸಿದೆ. ಸಿಬ್ಬಂದಿ ರಾತ್ರಿ ಗಸ್ತು ಹೋಗುವ ಸಮಯದಲ್ಲಿ ಚಿರತೆಗಳು ಆ ಭಾಗದಲ್ಲಿ ಕಾಣಿಸಿಕೊಂಡಿದ್ದು ಇದು ಆಹಾರ ಅರಸಿ ಬರುತ್ತಿವೆ ಎಂದು ಹೇಳಿದ್ದಾರೆ. ಜನವಸತಿ ಪ್ರದೇಶಕ್ಕೆ ಬಂದರೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಕೊಟ್ಟರೆ ಅವುಗಳನ್ನು ಅಲ್ಲಿಂದ ಸ್ಥಳಾಂತರಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದು ವಲಯ ಅರಣ್ಯಾಧಿಕಾರಿ ವಿಶ್ವನಾಥ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-20-1475667718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.