ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಭಾನುವಾರ ಸಂಜೆ ಪಟ್ಟಣದ ತಮ್ಮ ಕಚೇರಿಯಲ್ಲಿ ಜನಸ್ಪಂದನಾ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿದರು.

ತಾಲ್ಲೂಕಿನ ಜನರು ಕುಡಿಯವ ನೀರು, ರಸ್ತೆ, ಸೇತುವೆ ಮುಂತಾದವುಗಳಿಗೆ ಸಚಿವರಿಗೆ ಮನವಿ ಸಲ್ಲಿಸಿದರು. ಕೆಲವರು ಶಿಕ್ಷಣ, ಅನಾರೋಗ್ಯಕ್ಕೆ ಸಹಾಯ, ಮದುವೆ ಮುಂತಾದ ಕಾರ್ಯಕ್ರಮಕ್ಕೆ ಸಚಿವರಿಂದ ಸಹಾಯ ಯಾಚಿಸಿದರು. ಸಚಿವರು ಕೆಲವು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು. ಇನ್ನು ಕೆಲವು ಸಮಸ್ಯೆಗಳಿಗೆ ತಮ್ಮ ಆಪ್ತ ಸಹಾಯಕರಾದ ನಾಗೇಂದ್ರ ಮೊಗೇರ ಮತ್ತು ನಾಗರಾಜ ನಾಯ್ಕ ಅವರ ಬಳಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಡುವಂತೆ ಸೂಚಿಸಿದರು.

ಮದುವೆ, ಶಿಕ್ಷಣ, ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಸಚಿವರು ಧನಸಹಾಯ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-20-840018953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.