ಭಟ್ಕಳ: ತಾಲ್ಲೂಕಿನ ಶಿರಾಲಿನ ಕಳಿನಕಟ್ಟೆ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಡೆಯಾದ ಶಿರಾಲಿಯ ಪಡುಶಿರಾಲಿ ನಿವಾಸಿ ಮಾದೇವ ಜಟ್ಟಪ್ಪ ನಾಯ್ಕ (52) ಮೃತದೇಹ ಸೋಮವಾರ ಬೆಳಿಗ್ಗೆ ಮುಳುಗಿದ ಸ್ಥಳದಲ್ಲಿಯ ಅನತಿ ದೂರದಲ್ಲಿ ಪತ್ತೆಯಾಗಿದೆ.

ಪತ್ತೆಯಾದ ಮೃತದೇಹವನ್ನು ಶವಪರೀಕ್ಷೆ ಬಳಿಕ ಅಂತ್ಯಕ್ರಿಯೆಗಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಎಲ್ಲ 8 ಮೃತದೇಹಗಳ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಿಗ್ಗೆ ಅವರವರ ಕುಟುಂಬಕ್ಕೆ ಸೇರಿದ ಜಮೀನುಗಳಲ್ಲಿ ನಡೆಸಲಾಗಿದೆ. ಸೋಮವಾರ ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೃತರ ಕುಟಂಬಗಳಿಗೆ ತೆರಳಿ ಸಾಂತ್ವಾನ ಹೇಳಿದರು.

ಜಿಲ್ಲಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸೋಮವಾರ ಸಂತ್ರಸ್ತರ ಮನೆಗೆ ತೆರಳಿ ಸಾಂತ್ವಾನ ಹೇಳಿ ಮೃತಪಟ್ಟ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ತಿಳಿಸಿದರು. ಸರ್ಕಾರದಿಂದ ಪರಿಹಾರ ಮಾತ್ರವಲ್ಲದೆ ಮೀನುಗಾರಿಕೆ ಇಲಾಖೆಯಿಂದಲೂ ಸಾಧ್ಯವಾದರೆ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-20-389775501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.