ಭಟ್ಕಳ (ಉತ್ತರ ಕನ್ನಡ ಜಿಲ್ಲೆ): ಇಲ್ಲಿನ ವೆಂಕಟಾಪುರದ ಜಾಗಟೆಬೈಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೇವರ ಹೊರೆ ಇಳಿಸುತ್ತಿದ್ದ ಮುರಿನಕಟ್ಟೆಯನ್ನು ಭಾನುವಾರ ಬೆಳಿಗ್ಗೆ ಹಿಂದೂ ಜಾಗರಣ ವೇದಿಕೆಯವರು, ಸ್ಥಳೀಯರು ನಿರ್ಮಿಸಿದರು. ರಾತ್ರಿ ವೇಳೆಗೆ ಮುಸ್ಲಿಂ ಸಮುದಾಯದವರು ಅದನ್ನು ತೆರವುಗೊಳಿಸಿದರು.

ನಾಲ್ಕು ವರ್ಷಗಳ ಹಿಂದೆ ಹೆದ್ದಾರಿ ಕಾಮಗಾರಿ ಆರಂಭವಾದಾಗ ಮುರಿನಕಟ್ಟೆ ಪ್ರದೇಶವನ್ನು ತೆರವು ಗೊಳಿಸಲಾಗಿತ್ತು.

ಮುರಿನಕಟ್ಟೆ ಇದ್ದ ಸ್ಥಳದ ಹಿಂಬದಿ ಮುಸ್ಲಿಮರೊಬ್ಬರು ಮನೆ ಕಟ್ಟಲು ಸಿದ್ಧತೆ ನಡೆಸಿದ್ದರು. ಕಟ್ಟೆ ಜಾಗ ಒತ್ತುವರಿ ಆಗಬಹುದು ಎಂದು ಆಕ್ಷೇಪಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಟ್ಟೆ ನಿರ್ಮಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮುಸ್ಲಿಂ ಸಮುದಾಯದ ಕೆಲವರು ಕಟ್ಟೆ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದರು. ಕಟ್ಟೆ ಇದ್ದ ಜಾಗದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ರಾತ್ರಿ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಕಟ್ಟೆ ತೆರವಿಗೆ ಒತ್ತಾಯಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಎದುರಿನಲ್ಲೇ ಕಟ್ಟೆ ಒಡೆದು ತೆರವುಗೊಳಿಸಿದರು.

ಘಟನೆಗೆ ಸಂಬಂಧಿಸಿ ತಡರಾತ್ರಿ ವರೆಗೂ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-1622547685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.