ಭಟ್ಕಳ (ಉತ್ತರ ಕನ್ನಡ ಜಿಲ್ಲೆ): ‘ಮುರಿನಕಟ್ಟೆ ತೆರವುಗೊಳಿಸಿರುವ ಸ್ಥಳದಲ್ಲೇ ಕಟ್ಟೆಯನ್ನು ಪುನರ್ ನಿರ್ಮಿಸಬೇಕು. ಸರ್ಕಾರವೇ ಮುಂದಿನ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಆರ್.ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಹಳೆಯ ಬಸ್ ನಿಲ್ದಾಣದ ಎದುರಿನಿಂದ ತಾಲ್ಲೂಕು ಆಡಳಿತ ಸೌಧದ ಆವರಣದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ‘ರಾಜ್ಯ ಸರ್ಕಾರದಿಂದ ಮುಸ್ಲಿಂ ಓಲೈಕೆ ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದರು.

‘ಹಿಂದೂಗಳ ಶ್ರದ್ಧಾ ಕೇಂದ್ರವಾದ ಮುರಿನಕಟ್ಟೆಗೆ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಸರ್ಕಾರ, ಮುರಿನಕಟ್ಟೆ ನಿರ್ಮಿಸದಿದ್ದರೆ ನಾನೇ ಮುಂದೆ ನಿಂತು ಕಟ್ಟೆ ನಿರ್ಮಿಸಿ
ಕೊಡುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಮಾಜಿ ಶಾಸಕರಾದ ಸುನೀಲ ನಾಯ್ಕ, ಶಿವಾನಂದ ನಾಯ್ಕ, ಸುನೀಲ ಹೆಗಡೆ ಇತರರಿದ್ದರು.

ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.