ಭಟ್ಕಳ: ಮೇ 24ರಂದು ಮತಾಂಧ ಮುಸ್ಲಿಂ ದುಷ್ಕರ್ಮಿಗಳು ಹಿರಿಯರ ಮಾರ್ಗದರ್ಶನದಲ್ಲಿ ಅಂದೇ ಬೆಳಿಗ್ಗೆ ಕಟ್ಟಲಾಗಿದ್ದ ಮುರಿನಕಟ್ಟೆಯನ್ನು ಸಾವಿರಾರು ಸಂಖ್ಯೆಯಲ್ಲಿ ಬಂದು ಧ್ವಂಸಗೊಳಿಸಿರುವುದು ಖಂಡನೀಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಈ ಕುರಿತು ಮಂಗಳವಾರ ಭಟ್ಕಳಕ್ಕೆ ಭೇಟಿ ಕೊಟ್ಟು ಮುರಿನಕಟ್ಟೆಯನ್ನು ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಮುರಿನಕಟ್ಟೆಯನ್ನು ಪುನರ್ ನಿರ್ಮಾಣ ಮಾಡಲು ಹೆದ್ದಾರಿ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಎಸ್ಪಿ ಜೊತೆ ಈಗಾಗಲೇ ಹಲವಾರು ಸುತ್ತಿನ ಮಾತುಕತೆ ನಡೆಸಲಾಗಿದೆ. ಅಂತಿಮವಾಗಿ ನಮ್ಮ ಧಾರ್ಮಿಕ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ ಹಿಂದೆ ಇದ್ದ ಸ್ಥಳದಲ್ಲಿಯೇ ಮುರಿನಕಟ್ಟೆ ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಮುರಿನಕಟ್ಟೆಯ ವಿಷಯ ಕೇವಲ ಭಟ್ಕಳಕ್ಕೆ ಮಾತ್ರ ಸೀಮಿತವಾಗಿರದೇ ಇಡೀ ರಾಜ್ಯದಲ್ಲಿ ಬಹುಮುಖ್ಯ ಘಟನೆಯಾಗಿ ಪರಿಣಾಮ ಬೀರಿತ್ತು. ರಾಜ್ಯ ಗಮನ ಸೆಳೆದ ವಿಷಯವಾದ್ದರಿಂದ ಇದನ್ನು ಸೂಕ್ತ ರೀತಿಯಲ್ಲಿ ಬಗೆಹರಿ ಸುವುದು ಮುಖ್ಯವಾಗಿದೆ. ಬಿ.ಜೆ.ಪಿ. ವತಿಯಿಂದ ಮುರಿನಕಟ್ಟೆಯಲ್ಲಿ ಕಟ್ಟಿದ ನೂತನ ಕಟ್ಟೆಯನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಈಗಾಗಲೇ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನ ಸೇರಿ ಪ್ರತಿಭಟನೆ ಮಾಡಿದ್ದೇವೆ. ಈ ವಿಷಯದಲ್ಲಿ ಯಾವುದೇ ಸಂಘಟನೆಗಳು ಪ್ರತಿಭಟನೆ ನಡೆಸುವುದಿದ್ದಲ್ಲಿ ಅದಕ್ಕೆ ನಮ್ಮ ಬೆಂಬಲವೂ ಇರುತ್ತದೆ ಎಂದು ಹೇಳಿದರು.

ಮೊದಲಿದ್ದ ಜಾಗದಲ್ಲಿಯೇ ಕಟ್ಟೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಹೆದ್ದಾರಿ ಇಲಾಖೆಯ ವತಿಯಿಂದ ನೀಲನಕ್ಷೆ ಸಹ ತಯಾರಿಸಲಾಗಿದ್ದು, ಜಾಗ ಗುರುತಿಸಿಕೊಂಡು ಆದಷ್ಟು ಶೀಘ್ರದಲ್ಲಿ ಕಟ್ಟೆ ನಿರ್ಮಾಣ ಮಾಡಲಿದ್ದೇವೆ ಎಂದರು.

ಮುರಿನಕಟ್ಟೆಯನ್ನು ಕಟ್ಟಿ ಯಾವುದೇ ರೀತಿಯ ತೊಂದರೆಯಾಗದಂತೆ ಲೈಟಿಂಗ್, ಗ್ರಿಲ್ಸ್ ಹಾಕಲಾಗುವುದು. ಅದರ ಪಕ್ಕದಲ್ಲಿ ಬಸ್ ಬೇ ನಿರ್ಮಾಣ ಮಾಡಲು ಕೂಡಾ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯಲ್ಲಿ ವಾಹನ ಓಡಾಟಕ್ಕೆ ತೊಂದರೆಯಾಗದಂತೆ ನೀಲ ನಕ್ಷೆ ತಯಾರಿಸಲಾಗಿದೆ ಎಂದರು.

ಸುದ್ದಿಗಾರರು ಕೇಳಿದ ಪ್ರಶ್ನೆಗುತ್ತರಿಸಿದ ಅವರು ಯಾವುದೇ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ ವಶಪಡಿಸಿಕೊಂಡ ಜಾಗಾವನ್ನು ಅತಿಕ್ರಮಣ ಮಾಡಲು ಬಿಡುವುದಿಲ್ಲ. ಕಾನೂನಾತ್ಮಕವಾಗಿ ಎಲ್ಲ ಕೆಲಸಗಳನ್ನು ಕೂಡಾ ತ್ವರಿತಗತಿಯಲ್ಲಿ ಮಾಡಿ ಮುಗಿಸುತ್ತೇವೆ ಎಂದರು.

ಮಾಜಿ ಶಾಸಕ ಸುನೀಲ ನಾಯ್ಕ, ಪ್ರಮುಖರಾದ ಗೋವಿಂದ ನಾಯ್ಕ, ಲಕ್ಷ್ಮೀ ನಾರಾಯಣ ನಾಯ್ಕ, ಕೇದಾರ ಕೊಲ್ಲೆ, ಶಿವಾನಿ ಶಾಂತರಾಂ, ರಾಜೇಶ ನಾಯ್ಕ, ಭಾಸ್ಕರ ದೈಮನೆ, ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-448110282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.