ಹಳಿಯಾಳ: ಭಟ್ಕಳ ಪಟ್ಟಣದ ಐತಿಹಾಸಿಕ ಮತ್ತು ಪವಿತ್ರ ಮುರುವಿನ ಕಟ್ಟೆ ಧ್ವಂಸ ಮಾಡಿರುವವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನಿಲ್ ಹೆಗಡೆ ಆಗ್ರಹಿಸಿದ್ದಾರೆ.

ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ನೀಡಿದ್ದು, ಭಟ್ಕಳದ ಮುರುವಿನ ಕಟ್ಟೆ ಕೇವಲ ಕಲ್ಲಿನ ರಚನೆಯಲ್ಲ. ಇದು ನೂರಾರು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಸಮಾಜದ ನಂಬಿಕೆ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ ಎಂದಿದ್ದಾರೆ.

ಜಿಲ್ಲಾಡಳಿತ ಕೂಡಲೇ ಸತ್ಯಾಸತ್ಯತೆ ಬಹಿರಂಗಪಡಿಸಿ, ಮುರುವಿನ ಕಟ್ಟೆಯ ಧಾರ್ಮಿಕ ಪರಂಪರೆಗೆ ಧಕ್ಕೆ ಬಾರದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಪವಿತ್ರ ಸ್ಥಳ ಮುರುವಿನ ಕಟ್ಟೆಯನ್ನು ಶಾಸ್ತ್ರೋಕ್ತವಾಗಿ ಮರು ನಿರ್ಮಾಣ ಮಾಡಿ ಇದಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-1208037334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.