ಭಟ್ಕಳ: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಬಿಗಡಾಯಿಸಿದೆ. ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ತೊಂದರೆ ಹೆಚ್ಚಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ.

ಕಳೆದ 8 ವರ್ಷಗಳಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ನಗರ ವ್ಯಾಪ್ತಿಯಲ್ಲಿ ಕೆಲಸ ಪೂರ್ಣಗೊಂಡಿರಲಿಲ್ಲ. ಮೇಲ್ಸೇತುವೆ, ಸರ್ವೀಸ್ ರಸ್ತೆ, ಒಳಚರಂಡಿ ನಿರ್ಮಾಣದ ಬೇಡಿಕೆ ಇದ್ದ ಕಾರಣಕ್ಕೆ, ಜೊತೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಪ್ರಕರಣ ನಡೆದಿದ್ದರಿಂದ ಕಾಮಗಾರಿ ತಡವಾಗಿದೆ.

ಗುತ್ತಿಗೆ ಅವಧಿ ಪೂರ್ಣಗೊಳ್ಳುವ ನೆಪದಲ್ಲಿ ಸಾರ್ವಜನಿಕರ ಸಭೆ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೊದಲ ಹಂತದ ಕಾಮಗಾರಿ ಮುಗಿಸಲು ಸ್ಥಳೀಯರು ಸಹಕಾರ ನೀಡಿದರೆ ಎರಡನೇ ಹಂತದ ಕಾಮಗಾರಿ ವೇಳೆ ಜನರ ಬೇಡಿಕೆ ಈಡೇರಿಸುವ ಭರವಸೆ ನೀಡಿ ಕಾಮಗಾರಿ ಆರಂಭಿಸಿದ್ದರು.

ಕಳೆದ ಎರಡು ತಿಂಗಳ ಹಿಂದೆಯೇ ಕಾಮಗಾರಿ ಆರಂಭಿಸಿದ ಐ.ಆರ್.ಬಿ ಇನ್ಫ್ರಾಸ್ಟ್ರಕ್ಚರ್ ಕಂಪನಿಯು ಮಳೆಗಾಲ ಸಮೀಪಿಸಿದರೂ ಕಾಮಗಾರಿಗೆ ವೇಗ ನೀಡಿಲ್ಲ.

‘ರಂಗಿನಕಟ್ಟೆಯಿಂದ ಕೊಟೇಶ್ವರ ಕಾಲೊನಿಯ ತನಕ ರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸಿದ ಕಂಪನಿಯು ಮಳೆಗಾಲದಲ್ಲಿ ಹೆದ್ದಾರಿ ಮುಳುಗಡೆಯಾಗದಂತೆ ತಪ್ಪಿಸಲು ತುರಾತುರಿಯಲ್ಲಿ ಹೆದ್ದಾರಿಯನ್ನು 3 ರಿಂದ 4 ಅಡಿ ಎತ್ತರಕ್ಕೆ ಏರಿಸಿ ಡಾಂಬರೀಕರಣ ಮಾಡಿದೆ. ಹೀಗೆ ಏರಿಸುವಾಗ ರಸ್ತೆಯ ಎರಡು ಬದಿಗಳಲ್ಲಿರುವ ಅಂಗಡಿ ಮನೆಗಳಿಗೆ ನೀರು ನುಗ್ಗಲಿದೆ ಎನ್ನುವ ಸಾಮಾನ್ಯ ಜ್ಞಾನವೂ ಎಂಜಿನಿಯರ್ಗಳಿಗೆ ಬಂದಿಲ್ಲವೆ?’ ಎಂಬುದು ರಂಗಿನಕಟ್ಟೆ ಪ್ರದೇಶದ ಜನರ ಆರೋಪ.

‘ಮಳೆಗಾಲ ಸಮೀಪಿಸಿದಾಗ ತರಾತುರಿಯಲ್ಲಿ ಕಾಮಗಾರಿ ಮಗಿಸಲು ಪ್ರಯತ್ನಿಸಲಾಗುತ್ತಿದೆ. ಹೆದ್ದಾರಿಯನ್ನು ಮಾತ್ರ ಎತ್ತರಕ್ಕೆ ಏರಿಸಿ ಇಕ್ಕೆಲಿನ ತಗ್ಗು ಪ್ರದೇಶಗಳನ್ನು ಹಾಗೆಯೆ ಬಿಟ್ಟರೆ ಮಳೆಗಾಲದಲ್ಲಿ ಸಂಶುದ್ದೀನ್ ವೃತ್ತ, ರಂಗಿನಕಟ್ಟೆ ಪ್ರದೇಶದ ಅಂಗಡಿ ಮನೆಗಳು ಸಂಪೂರ್ಣ ಜಲಾವೃತಗೊಳ್ಳಲಿದೆ’ ಎಂಬುದು ಅವರ ದೂರು.

‘ಮಳೆಗಾಲ ಆರಂಭಕ್ಕೂ ಮುನ್ನ ಕಾಮಗಾರಿ ಮುಗಿಸಬೇಕು ಎನ್ನುವ ಧಾವಂತದಲ್ಲಿ ಐಆರ್ಬಿ ಇನ್ಫ್ರಾಸ್ಟ್ರಕ್ಚರ್ ಕಂಪನಿಯು ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿದೆ. ಇದರಿಂದಾಗಿ ಪ್ರತಿದಿನ ವಾಹನ ಸವಾರರು ಪರದಾಡುವಂತಾಗಿದೆ. ವಿಸ್ತರಣೆ ಕಾಮಗಾರಿ ನೆಪವೊಡ್ಡಿ ಕಿರಿದಾದ ರಸ್ತೆಯ ಮೂಲಕ ವಾಹನ ಸಾಗಲು ಅನುವು ಮಾಡಿಕೊಡುತ್ತಿದ್ದು, ಕಿಲೋಮೀಟರ್ ತನಕ ವಾಹನ ದಟ್ಟಣೆ ಉಂಟಾಗುತ್ತಿದೆ. ಇದರಿಂದಾಗಿ ಅಪಘಾತಗಳು ಹೆಚ್ಚುತ್ತಿದೆ’ ಎನ್ನುವುದು ಸ್ಥಳೀಯರ ಆರೋಪ.

ಸಮಸ್ಯೆ ಕುರಿತು ಪ್ರತಿಕ್ರಿಯೆಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1187779280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.