ಭಟ್ಕಳ: ಶಹರ ಠಾಣೆಯ ಪಿ.ಎಸೈ ನವೀನ್ ಎಸ್. ನಾಯ್ಕ ಅವರನ್ನು 200025ನೇ ಸಾಲಿನ ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಮಾದಕದ್ರವ್ಯ ಪ್ರಕರಣಗಳನ್ನು ಒಳಗೊಂಡಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಸೇವಾ ದಕ್ಷತೆ ತೋರಿದ ಹಿನ್ನೆಲೆಯಲ್ಲಿ ಈ ಗೌರವ ಲಭಿಸಿದೆ.

ಪಿಎಸೈ ನವೀನ ನಾಯ್ಕ ಅವರು ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಭಟ್ಕಳ ಶಹರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಈ ಹಿಂದೆ ಜಿಲ್ಲೆಯ ಕುಮಟಾ, ಗೋಕರ್ಣ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಅಪರಾಧ ಪತ್ತೆಯಲ್ಲಿ ತೋರಿದ ತ್ವರಿತ ಕ್ರಮಗಳು ಹಾಗೂ ವೃತ್ತಿಪರ ನೈಪುಣ್ಯವನ್ನು ಪರಿಗಣಿಸಿ ಅವರನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-460672809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.