ಭಟ್ಕಳ: ತಾಲ್ಲೂಕಿನ ಮುಟ್ಟಳ್ಳಿ ಶಾಲಾ ಮೈದಾನದಲ್ಲಿ ಈಚೆಗೆ ನಡೆದ ‘ಸಂಜೀವಿನಿ ಮಾಸಿಕ ಸಂತೆ’ ಗ್ರಾಹಕರ ಗಮನ ಸೆಳೆದಿತು. ಸಂತೆಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಗೃಹೋತ್ಪನ್ನಗಳನ್ನು ಸ್ಥಳೀಯರು ಉತ್ಸಾಹ ಖರೀದಿಸಿದರು.

ತಾಲ್ಲೂಕು ಪಂಚಾಯಿತಿ ಭಟ್ಕಳ ಹಾಗೂ ಮುಟ್ಟಳ್ಳಿಯ ಮಂಜುನಾಥ ಸಂಜೀವಿನಿ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಗೃಹೋತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಟ್ಟಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 60ಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು. ಸಿಹಿತಿನಿಸುಗಳು, ಬಟ್ಟೆಗಳು, ಮನೆಗಳಲ್ಲಿ ಬೆಳೆದ ತರಕಾರಿಗಳು, ಸೊಪ್ಪುಗಳು, ಹಣ್ಣುಗಳು ಹಾಗೂ ಮನೆಮದ್ದಿನ ಉತ್ಪನ್ನಗಳು ಗ್ರಾಹಕರ ಮೆಚ್ಚುಗೆ ಪಡೆದವು.

ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಶಾಂತಿಕಾ ನಾಯಕ, ವಲಯ ಮೇಲ್ವಿಚಾರಕ ಗೋಪಾಲ ನಾಯ್ಕ, ವೆಂಕಟೇಶ ದೇವಡಿಗ, ದಿವ್ಯ ಶೆಟ್ಟಿ, ಉಷಾ ದೇವಡಿಗ, ಒಕ್ಕೂಟದ ಸದಸ್ಯರು ಹಾಗೂ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-849229431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.