ಭಟ್ಕಳ: ತಾಲ್ಲೂಕಿನ ಸೋಡಿಗದ್ದೆ ಮಹಾಸತಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಮೇ 14ರಂದು ನಡೆಯಲಿದೆ ಎಂದು ಸೋಡಿಗದ್ದೆ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವಿದಾಸ ಮೊಗೇರ ಹೇಳಿದರು.

ಪಟ್ಟಣದಲ್ಲಿ ಗುರುವಾರ ನೂತನ ದೇಗುಲ ನಿರ್ಮಾಣದ ಶಿಲನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾತನಾಡಿದ ಅವರು, ಮೇ 13ರಂದು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ಮೇ 14ರಂದು ಬೆಳಿಗ್ಗೆ 10.10 ಗಂಟೆಗೆ ಉಜಿರೆಯ ಶ್ರೀ ರಾಮಕ್ಷೇತ್ರದ ಪೀಠಾಧೀಶ ನಾಮಧಾರಿ ಕುಲಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನೂತನ ದೇಗುಲದ ಶಿಲನ್ಯಾಸಕ್ಕೆ ಅಡಿಪಾಯ ಹಾಕಲಿದ್ದಾರೆ ಎಂದರು.

ರಾಜ್ಯಸರ್ಕಾರದ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರೀಯಾ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.

ನಾಗರಾಜ ಈ.ಎಚ್., ನಾಗರಾಜ ನಾಯ್ಕ, ಮಾಸ್ತಿ ನಾಯ್ಕ, ಮೋಹನ ನಾಯ್ಕ, ಸತೀಶ ನಾಯ್ಕ, ಅಚ್ಯುತ್ ನಾಯ್, ದುರ್ಗಪ್ಪ ಮೊಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-20-1001842542

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.