ಭಟ್ಕಳ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಭಟ್ಕಳದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಗುರುವಾರ ಹೋಟೆಲ್ಗಳಿಗೆ ತೆರಳಿ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳ ಬಳಕೆಯಾಗುತ್ತಿದೆಯೇ ಎಂಬ ಬಗ್ಗೆ ತಪಾಸಣೆ ನಡೆಸಿದರು.

ಸರ್ಕಾರದ ಸೂಚನೆ ಅನ್ವಯ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಹಾಗೂ ಆಹಾರ ನಿರೀಕ್ಷಕ ಉದಯ ತಳವಾರ ಅವರು ಭಟ್ಕಳದಲ್ಲಿ ಹೋಟೆಲ್ ಅಡುಗೆ ಕೋಣೆಗಳನ್ನು ತಪಾಸಣೆಗೆ ಮಾಡಿ ಗೃಹ ಬಳಕೆ ಅಡುಗೆ ಅನಿಲದ ದುರ್ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳನ್ನು ಗೃಹ ಬಳಕೆದಾರರಿಗೆ ಆದ್ಯತೆಯಾಗಿ ವಿತರಿಸುವಂತೆ ಸೂಚನೆ ನೀಡಿದೆ. ಶಾಲೆ, ಅಂಗನವಾಡಿ ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಅಡುಗೆ ಅನಿಲ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.