ಗೋಕರ್ಣ: ಇತ್ತೀಚಿಗೆ ಭಟ್ಕಳದ ಶಾರದಾ ಹೊಳೆಯಲ್ಲಿ ನದಿಯಲ್ಲಿ ನಡೆದ ಜಲ ದುರಂತದಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ಕೂಡ ಮೀನುಗಾರರಂತೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಡಿ. ನಾಯ್ಕ ಆಗ್ರಹಿಸಿದರು.

ಅವರು ಬುಧವಾರ ಗೋಕರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಒಂದೇ ಕುಟುಂಬದ ಹಲವರು ಸೇರಿ 11 ಜನರು ಸಾವನ್ನಪ್ಪಿರುವುದು ನಿಜಕ್ಕೂ ದುರಂತವಾದದ್ದು. ರಾಜ್ಯ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಹಾಗೂ ಕೇಂದ್ರ ಸರ್ಕಾರ ತಲಾ ₹2 ಲಕ್ಷ ಘೋಷಿಸಿದೆ. ಆದರೆ ರಾಜ್ಯದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಮೀನುಗಾರರು ದುರಂತಕ್ಕೀಡಾದರೆ ರಾಜ್ಯ ಸರ್ಕಾರದಿಂದ ₹10 ಲಕ್ಷ ನೀಡಲಾಗುತ್ತದೆ. ಈ ಘಟನೆಯನ್ನು ಜಾತಿಯಿಂದ ಅಳೆಯದೇ ಕಸುಬಿನಿಂದ ಅಳೆದು ರಾಜ್ಯ ಸರ್ಕಾರ ಈ ಘಟನೆಯಲ್ಲಿ ಮೃತ ಪಟ್ಟವರಿಗೂ ತಲಾ ₹10 ಲಕ್ಷ ನೀಡಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಛರಿಸಿದರು.

ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಭಟ್ಕಳ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಧರ ನಾಯ್ಕ , ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಂಕೋಲಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ ಮಾತನಾಡಿದರು.

ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ ಗಂಗಾವಳಿ, ಅಂಕೋಲಾ ಘಟಕದ ಅಧ್ಯಕ್ಷ ದಾಮೋದರ ಜಿ. ನಾಯ್ಕ, ವರ್ಧನ ನಾಯ್ಕ ಬೇಲೆಕಾನ, ಅವಿನಾಶ ನಾಯ್ಕ ಮಧುರವಳ್ಳಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-20-1817634938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.