ಭಟ್ಕಳ: ಪಟ್ಟಣದ ತಂಝೀಮ್ ಸಭಾಂಗಣದಲ್ಲಿ ಭಾನುವಾರ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ‘ನನ್ನ ಮತ ನನ್ನ ಹಕ್ಕು’ ಜನಜಾಗೃತಿ ಸಭೆ ಜರುಗಿತು.

ಸಭೆಯಲ್ಲಿ ಸಂಘಟನೆಯ ಪ್ರಮುಖರಾದ ಐಶ್ವರ್ಯ ಹಾಗೂ ವಿನಯ ಶ್ರೀನಿವಾಸ ಅವರು ಎಸ್ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡಿ, ಮತದಾರರ ಮ್ಯಾಪಿಂಗ್, ಎಣಿಕೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು-ಆಕ್ಷೇಪಣೆ ಸಲ್ಲಿಕೆ ಮತ್ತು ಅಂತಿಮ ಪಟ್ಟಿಯ ಸಿದ್ಧತೆ ಸೇರಿದಂತೆ ವಿವಿಧ ಹಂತಗಳನ್ನು ವಿವರಿಸಿದರು.

ಎಸ್ಐಆರ್ ಪ್ರಕ್ರಿಯೆ ಮೂಲಕ ಕೆಲವು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಹೊರಗಿಟ್ಟು, ದೇಶದ ನಾಗರಿಕರಲ್ಲ ಎಂದು ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಸಂಘಟನೆ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ., ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಯಾಸೀನ್ ಮಲ್ಪೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-1435817246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.