ಶಿರಸಿ: ಬೇಡ್ತಿ ಹಾಗೂ ಅಘನಾಶಿನಿ ನದಿ ತಿರುವು ಯೋಜನೆಗಳನ್ನು ಕೈಬಿಡುವಂತೆ ಶಾಸಕ ಭೀಮಣ್ಣ ನಾಯ್ಕ ಅವರು ವಿಧಾನಸಭೆಯಲ್ಲಿ ಅಧಿಕೃತವಾಗಿ ವಿರೋಧ ದಾಖಲಿಸಿರುವುದು ಜಿಲ್ಲೆಯ ಜನರ ಹೋರಾಟಕ್ಕೆ ಮತ್ತಷ್ಟು ಬಲ ತಂದಿದೆ ಎಂದು ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ ಅವರು, ‘ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಬಲವಾಗಿ ಆಗ್ರಹಿಸಿದ್ದರು. ಜಿಲ್ಲೆಯ ಜನರ ಭಾವನೆಗಳನ್ನು ಸದನದ ಗಮನಕ್ಕೆ ತಂದ ಶಾಸಕರ ನಿಲುವು ಸ್ವಾಗತಾರ್ಹ ಸಂಗತಿ’ ಎಂದು ತಿಳಿಸಿದ್ದಾರೆ.

‘ಆರು ತಿಂಗಳಿನಿಂದ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲೆಯ ಮಠಾಧೀಶರು, ರೈತ ಸಂಘಟನೆಗಳು, ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳು ಈ ಯೋಜನೆಯ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಮಿತಿ ವತಿಯಿಂದ ಅಧಿಕೃತ ಮನವಿ ಸಲ್ಲಿಕೆಯಾಗಿದ್ದು, ಜಿಲ್ಲೆಯ ಸಂಸದರು ಹಾಗೂ ಎಲ್ಲಾ ಶಾಸಕರು ಪಕ್ಷಾತೀತವಾಗಿ ಈ ಯೋಜನೆಯನ್ನು ವಿರೋಧಿಸಿದ್ದಾರೆ. ಇದೀಗ ವಿಧಾನಸಭೆಯಲ್ಲೂ ಈ ಧ್ವನಿ ಅಧಿಕೃತವಾಗಿ ಪ್ರತಿಧ್ವನಿಸಿರುವುದು ಅತ್ಯಂತ ಮುಖ್ಯವಾದ ಸಂಗತಿಯಾಗಿದೆ’ ಎಂದು ಅಶೀಸರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-20-1567768068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.