ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು

Published 11 ಫೆಬ್ರುವರಿ 2024, 7:19 IST
Last Updated 11 ಫೆಬ್ರುವರಿ 2024, 7:19 IST
ಅಕ್ಷರ ಗಾತ್ರ

ಯಲ್ಲಾಪುರ: ದನವೊಂದು ರಸ್ತೆಗೆ ಅಡ್ಡಬಂದ ಪರಿಣಾಮ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ರಸ್ತೆಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಮಂಚಿಕೇರಿ ಸಮೀಪದ ಕೆರೆಹೊಸಳ್ಳಿಯ ಎಸ್ ಟಿ ಕಾಲೊನಿ ಕ್ರಾಸ್‌ನಲ್ಲಿ ಭಾನುವಾರ ಸಂಜೆ ನಡೆದಿದೆ.

ಕೆರೆಹೊಸಳ್ಳಿ ಗ್ರಾಮದ ನಿವಾಸಿ, ಕೂಲಿ ಕಾರ್ಮಿಕ ರಾಮಾ ಲಕ್ಷ್ಮಣ ಕುಣಬಿ (26) ಮೃತರು.

`ಮಂಚಿಕೇರಿಯಿಂದ ಕೆರೆಹೊಳ್ಳಿಗೆ ಹೋಗುತ್ತಿರುವಾಗ ರಸ್ತೆಗೆ ಅಡ್ಡಬಂದ ದನವನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗೊಂಡ ಸವಾರ ರಾಮಾ ಲಕ್ಷ್ಮಣ ಕುಣಬಿ ಸ್ಥಳದಲ್ಲಿಯೇ ಮೃತಪಟ್ಟರು ಎಂದು ಬೈಕ್‌ನ ಸಹ ಸವಾರ ಜಗನ್ನಾಥ ಗಣಪು ಕುಣಬಿ ಯಲ್ಲಾಪುರ ಠಾಣೆಯಲ್ಲಿ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT