ಕಾರವಾರ: ಬಿಪೊರ್ ಜಾಯ್ ಚಂಡಮಾರುತದ ಪ್ರಭಾವದಿಂದ ಬಿರುಗಾಳಿ ಬೀಸುವ ಸಾಧರ್ಯತೆ ಇದ್ದು ಜಿಲ್ಲೆಯ ಕರಾವಳಿ ಭಾಗದಲ್ಲಿ ಜೂನ್ 19ರ ವರೆಗೂ ಭಾರಿ ಗಾತ್ರದ ಅಲೆಗಳು ಅಪ್ಪಳಿಸುವದರಿಂದ ಕಡಲತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ಹೈ ವೇವ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಐದು ದಿನಗಳವರೆಗೆ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಲಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚನೆ ಆಧರಿಸಿ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ತುರ್ತು ನಿರ್ವಹಣಾ ಕೇಂದ್ರವನ್ನು ತೆರೆಯಲಾಗಿದ್ದು, ಉತ್ತರ ಕನ್ನಡ ಜಿಲ್ಲಾ ಕಂಟ್ರೋಲ್ ರೂಮ್ 08382-229857/1077 ಅಥವಾ ವಾಟ್ಸ್ಯಾಪ್ ಸಂಖರ್ಯೆ 9483511015 ಗೆ ತುರ್ತು ಸಂದರ್ಭದಲ್ಲಿ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.