ಕಾರವಾರ: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಮತ್ತು ಭಟ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕ ಚುನಾವಣಾ ಆಯೋಗ ನಿಗದಿಪಡಿಸಿದ್ದ ಮಿತಿಗಿಂತ ಹೆಚ್ಚು ವೆಚ್ಚ ಮಾಡಿದ ವಿಚಾರದ ಬಗ್ಗೆ ಆಯೋಗಕ್ಕೆ ಮಾಹಿತಿ ರವಾನೆಯಾಗಿದೆ.

‘ಒಬ್ಬ ಅಭ್ಯರ್ಥಿಗೆ ಗರಿಷ್ಠ ₹40 ಲಕ್ಷ ವೆಚ್ಚ ಮಾಡಲು ಮಾತ್ರ ಅವಕಾಶ ಇತ್ತು. ಶಿವರಾಮ ಹೆಬ್ಬಾರ ಅವರು ಮಿತಿಗಿಂತ ₹1.5 ಲಕ್ಷ, ಸುನೀಲ ನಾಯ್ಕ ₹5 ಲಕ್ಷದಷ್ಟು ಹೆಚ್ಚುವರಿ ವೆಚ್ಚ ಮಾಡಿದ್ದಾರೆ ಎಂದು ಚುನಾವಣೆಯ ವೆಚ್ಚ ವೀಕ್ಷಕರು ತಿಳಿಸಿದ್ದಾರೆ. ಇದನ್ನು ಆಧರಿಸಿ ಮುಖ್ಯ ಚುನಾವಣಾಧಿಕಾರಿಗೆ ಮಾಹಿತಿ ಸಲ್ಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

‘ಅಭ್ಯರ್ಥಿಗಳು ಸಲ್ಲಿಸಿದ ಪ್ರಮಾಣಪತ್ರದಲ್ಲಿ ಮಿತಿಗಿಂತ ಕಡಿಮೆ ವೆಚ್ಚ ಮಾಡಿರುವ ಬಗ್ಗೆ ಮಾಹಿತಿ ಇದೆ. ಇದನ್ನು ಕೂಲಂಕಷವಾಗಿ ಪರಿಶೀಲಿಸಿದ ವೆಚ್ಚ ವೀಕ್ಷಕರು ಕೆಲ ವೆಚ್ಚ ದರಕ್ಕೆ ಆಕ್ಷೇಪಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ವೀಕ್ಷಕರ ಅಭಿಪ್ರಾಯ ಆಧರಿಸಿ ಪರಿಶೀಲಿಸಿದಾಗ, ಹೆಚ್ಚು ವೆಚ್ಚವಾಗಿರುವುದು ಕಂಡುಬಂದಿದೆ’ ಎಂದು ಅವರು ತಿಳಿಸಿದ್ದಾರೆ.

ಆಯೋಗಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಶಿವರಾಮ ಹೆಬ್ಬಾರ ತಾವು ₹38,16,363 ವೆಚ್ಚ ಮಾಡಿದ್ದಾಗಿ, ಸುನೀಲ ನಾಯ್ಕ ₹30,48,984 ವೆಚ್ಚ ಮಾಡಿರುವುದಾಗಿ ಅಫಿಡವಿಟ್ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.