ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

'ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಹುದ್ದೆ ತೊರೆಯಲಿ'

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್. ಹೆಗಡೆ ಆಗ್ರಹ
Published 20 ಆಗಸ್ಟ್ 2024, 12:52 IST
Last Updated 20 ಆಗಸ್ಟ್ 2024, 12:52 IST
ಅಕ್ಷರ ಗಾತ್ರ

ಕಾರವಾರ: ‘ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್. ಹೆಗಡೆ ಒತ್ತಾಯಿಸಿದರು.

‘ನಾಲ್ಕು ದಶಕದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಸ್ವಯಂ ಅಫಿಡವಿಟ್ ನೀಡಿಕೊಳ್ಳುತ್ತಿರುವ ಸಿದ್ದರಾಮಯ್ಯ ವಿರುದ್ಧ 106 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 65 ಪ್ರಕರಣಗಳಲ್ಲಿ ಅಧಿಕಾರ ಬಲದಿಂದ ‘ಬಿ’ ರಿಪೋರ್ಟ್ ಹಾಕಿಸಿದ್ದಾರೆ’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.

‘ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿರುವ ಅವರ ವರ್ತನೆ ಸರಿಯಲ್ಲ. ರಾಜ್ಯಪಾಲರ ನಿರ್ಧಾರವನ್ನು ವಿರೋಧಿಸುವ ಜತೆಗೆ, ಪ್ರಕರಣದ ಆರೋಪವಿದ್ದರೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುವುದು ಸಂವಿಧಾನಕ್ಕೆ ಮಾಡುವ ಅಪಚಾರ’ ಎಂದರು.

‘ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಯ ಸಮೀಕ್ಷೆ ನಡೆಸುತ್ತಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರ ನಿರ್ಲಕ್ಷಿಸುತ್ತಿದೆ. ಶಿರೂರು ದುರಂತದಲ್ಲಿ ಮನೆ ಕಳೆದುಕೊಂಡವರಿಗೆ ಬಿಡಿಗಾಸಿನ ಪರಿಹಾರ ಘೋಷಿಸುವ ಸಿದ್ದರಾಮಯ್ಯ ಕೇರಳದ ವಯನಾಡಿನಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದ್ದಾರೆ. ರಾಜ್ಯದ ಜನರ ಹಿತಕಾಯುವ ಕೆಲಸವನ್ನು ಮೊದಲು ಮಾಡಲಿ’ ಎಂದರು.

ವಕ್ತಾರ ಸದಾನಂದ ಭಟ್, ‘ಸಂವಿಧಾನಕ್ಕೆ ಗಂಡಾಂತರವಿದೆ ಎಂದು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದ ಕಾಂಗ್ರೆಸ್ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದರು.

ಜಗದೀಶ ನಾಯಕ, ಸಂಜಯ ಸಾಳುಂಕೆ, ಕಿಶನ್ ಕಾಂಬ್ಳೆ, ಸುಭಾಶ ಗುನಗಿ, ವೃಂದಾ ದಾಮ್ಸಡೇಕರ, ಕಲ್ಪನಾ ನಾಯ್ಕ, ಪೂಜಾ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT