ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ: ಸಚಿವ ಮಂಕಾಳ ವೈದ್ಯ

Published 14 ಏಪ್ರಿಲ್ 2024, 13:56 IST
Last Updated 14 ಏಪ್ರಿಲ್ 2024, 13:56 IST
ಅಕ್ಷರ ಗಾತ್ರ

ಭಟ್ಕಳ: ‘ಬಿಜೆಪಿಯವರು ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ, ಅಧಿಕಾರಿಕ್ಕಾಗಿ ಯಾವ ಸುಳ್ಳನ್ನೂ ಸೃಷ್ಟಿಸಬಲ್ಲರು’ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ಜಾಲಿ ನಾಮಧಾರಿ ಸಭಾಭವನದಲ್ಲಿ ಶನಿವಾರ ನಡೆದ ಹೆಬಳೆ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿ, ‘ಹೊಸ ಇತಿಹಾಸವನ್ನು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌  ಮೂಲಕ ಸೃಷ್ಟಿಸ ಹೊರಟಿದ್ದು, ನೆಹರೂ ಅವರು ದೇಶವನ್ನು ಹಾಳುಮಾಡಿದ್ದಾರೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಬ್ರಿಟಿಷರು ದೇಶ ಬಿಟ್ಟುಕೊಡುವಾಗ ದೇಶದ ಆರ್ಥಿಕ ಪರಿಸ್ಥಿತಿ ಹೇಗಿತ್ತು ಎನ್ನುವುದು ಎಲ್ಲರಿಗೂ ತಿಳಿದಿದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿರುವುದು ಕಾಂಗ್ರೆಸ್ ಸರ್ಕಾರ’ ಎಂದರು.

 ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಟೀಕೆ ಮಾಡಿದ ಅವರು, ಯೋಜನೆಗಳ ಅನುಷ್ಠಾನ ಮಾಡುವವರು ಜನರು, ಫೋಟೋ ಅವರದ್ದು ಎಂದೂ ಗೇಲಿ ಮಾಡಿದರು.

ಕೆಪಿಸಿಸಿ ವಕ್ತಾರ ಸುಧೀರಕುಮಾರ್ , ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿದರು.

ಕೆಪಿಸಿಸಿ ಸಂಯೋಜಕ ವಿಶ್ವಾಸ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಮಾ ಮೊಗೇರ, ಜಿ.ಪಂ.ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿ.ಪಂ. ಮಾಜಿ ಸದಸ್ಯ ಅಲ್ಬರ್ಟ ಡಿಕೋಸ್ತಾ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT