ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣಕ್ಕೆ ಈಶ್ವರಪ್ಪ ಭೇಟಿ: ಆತ್ಮಲಿಂಗಕ್ಕೆ ಪೂಜೆ ಸಲ್ಲಿಕೆ

Last Updated 19 ಏಪ್ರಿಲ್ 2022, 5:52 IST
ಅಕ್ಷರ ಗಾತ್ರ

ಗೋಕರ್ಣ: ಗ್ರಾಮೀಣಾಭಿವೃದ್ಧಿ ಖಾತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗೋಕರ್ಣಕ್ಕೆ ಮಂಗಳವಾರ ಭೇಟಿ ನೀಡಿ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ಅವರು, 'ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಬಂದಿದ್ದೇನೆ. ದೇವರಿಗೆ ಪೂಜೆ ಸಲ್ಲಿಸಿ ಮನಸ್ಸಿನ ನಿರಾಳತೆ ಬಯಸಿದ್ದೇನೆ. ಯಾವುದೇ ರಾಜಕೀಯ ಮಾತನಾಡುವುದಿಲ್ಲ' ಎಂದರು.

ಇದಕ್ಕೂ ಮೊದಲು ಅಂಗಾರಕ ಸಂಕಷ್ಟಿಯ ನಿಮಿತ್ತ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯ ಸದಸ್ಯರು ಎಲ್ಲ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.

ಕುಮಟಾ ಶಾಸಕ ದಿನಕರ ಶೆಟ್ಟಿ,ಬಿ.ಜೆ.ಪಿ.ಪ್ರಮುಖರಾದ ಪ್ರಮೋದ ಹೆಗಡೆ, ಗೋಕರ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ತೊರ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ಕವರಿ ಮುಂತಾದವರು ಇದ್ದರು.

ಕೋಟಿತೀರ್ಥಕ್ಕೆ ಭೇಟಿ ನೀಡದ ಈಶ್ವರಪ್ಪ
ಸಚಿವರಾಗಿದ್ದಾಗ ತಾವೇ ಹೆಚ್ಚಿನ ಮುತುವರ್ಜಿ ವಹಿಸಿ ಅನುದಾನ‌ ಬಿಡುಗಡೆ ಮಾಡಿದ್ದ ಕೋಟಿತೀರ್ಥದ ಸ್ವಚ್ಛತಾ ಕಾಮಗಾರಿಯನ್ನು ವೀಕ್ಷಿಸಲು ಆಸಕ್ತಿ ತೋರದೇ ಹಾಗೆಯೇ ತೆರಳಿದರು. 15 ದಿನಗಳ ಹಿಂದೆ ಗೋಕರ್ಣಕ್ಕೆ ಬಂದಿದ್ದಾಗ, ಕೋಟಿತೀರ್ಥದ ಕಾಮಗಾರಿ ವೀಕ್ಷಿಸಿ ಮತ್ತೆ ನೋಡಲು ಬರುವುದಾಗಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT