ಕಾರವಾರ: ‘ಬಿ.ಎಸ್.ಯಡಿಯೂರಪ್ಪ ಅವರನ್ನೇ ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿಯ ರಾಜ್ಯಮಟ್ಟದ ಕೆಲ ನಾಯಕರು, ಅವರ ಮಗ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸದೆ ಬಿಡುವರೇ’ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಲೇವಡಿ ಮಾಡಿದರು.
‘ವಿಜಯೇಂದ್ರ ಆಯ್ಕೆ ಬಗ್ಗೆ ನಾವು ಟೀಕಿಸುವುದಿಲ್ಲ. ಆದರೆ, ಅವರನ್ನು ಒಪ್ಪಿಕೊಳ್ಳಲು ಅವರ ಪಕ್ಷದಲ್ಲೇ ಕೆಲವರು ಸಿದ್ಧರಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ನಾವು ಈ ಹಿಂದೆ ಹಿನ್ನಡೆ ಅನುಭವಿಸಿದೆವು. ಈಗ ಬಿಜೆಪಿಗೆ ಅಂತದ್ದೇ ಸ್ಥಿತಿ ಬರಲಿದೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈಗ ಕೆಲಸವಿಲ್ಲ. ಅದಕ್ಕೆ ಮುಖ್ಯಮಂತ್ರಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.