ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

Published 11 ಏಪ್ರಿಲ್ 2024, 6:39 IST
Last Updated 11 ಏಪ್ರಿಲ್ 2024, 6:39 IST
ಅಕ್ಷರ ಗಾತ್ರ

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ತಾಲ್ಲೂಕಿನ ಬನವಾಸಿಯಲ್ಲಿ ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ, ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ್ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವಕರ ಅವರು ಹೆಬ್ಬಾರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಇದೇ ವೇಳೆ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಉಸ್ತುವಾರಿ ಶಂಕರಗೌಡ ಪಾಟೀಲ, ಪ್ರಮುಖರಾದ ವೆಂಕಟೇಶ ಹೆಗಡೆ, ಸತೀಶ ನಾಯ್ಕ, ಆರ್.ಎಚ್.ನಾಯ್ಕ, ರಾಮಕೃಷ್ಣ ಮೂಲಿಮನಿ, ರವಿ ನಾಯ್ಕ, ದ್ಯಾಮಣ್ಣ ದೊಡ್ಮನಿ, ಸಿ.ಎಫ್.ನಾಯ್ಕ, ಪ್ರಕಾಶ ಹೆಗಡೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT