ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಕಸ್ತೂರಿ ರಂಗನ್ ಕರಡು ವರದಿಗೆ ಬಿಜೆಪಿ ವಿರೋಧ

Last Updated 20 ಜುಲೈ 2022, 13:31 IST
ಅಕ್ಷರ ಗಾತ್ರ

ಶಿರಸಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯದ ಕುರಿತು ಪ್ರಕಟವಾದ ಕಸ್ತೂರಿ ರಂಗನ್ ಕರಡು ವರದಿಗೆ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದೆ.

‘ಜನರ ಜೀವನವನ್ನು ಬುಡಮೇಲು ಮಾಡುವ ವರದಿ ಸೂಕ್ತವಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಪತ್ರಿಕಾ ಹೇಳಿಕೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಪಶ್ಚಿಮ ಘಟ್ಟ ಭಾಗದಲ್ಲಿ ಜನರು ಪಾರಂಪರಿಕವಾಗಿ ಕೃಷಿ, ಕೈಗಾರಿಕೆ, ಗುಡಿಕೈಗಾರಿಕೆ ಚಟುವಟಿಕೆಗಳನ್ನು ಪರಿಸರ ಪೂರಕವಾಗಿ ನಡೆಸುತ್ತಿದ್ದಾರೆ. ಅವೈಜ್ಞಾನಿಕವಾದ ವರದಿಯಿಂದ ಇಲ್ಲಿಯ ಕೈಗಾರಿಕೆ, ಕೃಷಿ, ರಸ್ತೆ, ಕಟ್ಟಡ, ಪ್ರವಾಸೋದ್ಯಮ ವಲಯಕ್ಕೆ ಗಂಭೀರವಾದ ಪರಿಣಾಮ ಬೀರಲಿದೆ. ಯುವಜನತೆ ಉದ್ಯೋಗಕ್ಕಾಗಿ ಬೇರೆ ಕಡೆ ವಲಸೆ ಹೋಗುತ್ತಿದ್ದು, ಇಲ್ಲಿಯ ಗ್ರಾಮೀಣ ಹಾಗೂ ನಗರ ಬದುಕು ಸಂಕಷ್ಟದಲ್ಲಿದೆ’ ಎಂದು ಹೇಳಿದ್ದಾರೆ.

‘ಈಗಿರುವ ಅರಣ್ಯ ಮತ್ತು ಪರಿಸರ ಕಾನೂನುಗಳು ಪಶ್ಚಿಮಘಟ್ಟ ಅಭಿವೃದ್ಧಿಗೆ ಪೂರಕವಾಗಿವೆ. ಕರಡು ವರದಿ ಅಂಗೀಕರಿಸುವ ಅಗತ್ಯವಿಲ್ಲ. ಅಲ್ಲದೆ, ಈಗಾಗಲೇ ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರದೇಶಗಳ ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವೂ ತಕರಾರು ಅರ್ಜಿ ಸಲ್ಲಿಸಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT