ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Published 22 ಜುಲೈ 2023, 6:25 IST
Last Updated 22 ಜುಲೈ 2023, 6:25 IST
ಅಕ್ಷರ ಗಾತ್ರ

ಕಾರವಾರ: ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿ, ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದವರು ಇಲ್ಲಿನ ಸುಭಾಷಚಂದ್ರ ಬೋಸ್ ವೃತ್ತದಲ್ಲಿ ಶನಿವಾರ ಪ್ರತಿಭಟಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ಸರ್ಕಾರ ಅಧಿಕಾರ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.

'ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿರುವ ಪ್ರಕರಣವನ್ನು ಎನ್.ಐ.ಎಗೆ ಒಪ್ಪಿಸಬೇಕು. ದಿನಬಳಕೆ ವಸ್ತುಗಳ ಬೆಲೆ ಇಳಿಕೆ ಮಾಡಬೇಕು' ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, 'ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿಯ ಶಾಸಕರನ್ನು ಅಮಾನತ್ತುಗೊಳಿಸುವದರ ಹಿಂದೆ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ ಪ್ರದರ್ಶನವಾಗಿದೆ' ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, 'ಉಚಿತ ಯೋಜನೆಗಳ ಜಾರಿ ಉದ್ದೇಶಕ್ಕೆ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ರದ್ದುಪಡಿಸಿದೆ. ಬಡವರು, ಹಿಂದುಳಿದವರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ಸೌಲಭ್ಯಗಳನ್ನು ಕಸಿದುಕೊಂಡಿದೆ' ಎಂದರು.

ಉಷಾ ಹೆಗಡೆ, 'ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ' ಎಂದು ಆರೋಪಿಸಿದರು.

'ದೇಶದಲ್ಲಿ ನೂರಾರು ಪಕ್ಷಗಳು ಒಗ್ಗಟ್ಟಾಗಿ ಹೋರಾಡಿದರೂ ನರೇಂದ್ರ ಮೋದಿ ಸೋಲಿಸಲು ಸಾಧ್ಯವಿಲ್ಲ. ಗ್ಯಾರಂಟಿ ಯೋಜನೆ ಜಾರಿಗೆ ತರುವ ಘೋಷಣೆ ಮಾಡಿ ಅವುಗಳ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲದಂತೆ ಮಾಡಲಾಗುತ್ತಿದೆ' ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಹೇಳಿದರು.

ಬಿಜೆಪಿ ಪ್ರಮುಖರಾದ ಚಂದ್ರು ಎಸಳೆ, ನಾಗೇಶ ಕುರ್ಡೇಕರ್, ಸುಭಾಷ ಗುನಗಿ, ಸಂಜು ನಾಯ್ಕ,  ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT