ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯವರು ನನ್ನ ನೈತಿಕತೆ ಪ್ರಶ್ನಿಸುವಂತಿಲ್ಲ: ಶಾಸಕ ಶಿವರಾಮ ಹೆಬ್ಬಾರ್

Published 27 ಆಗಸ್ಟ್ 2024, 19:45 IST
Last Updated 27 ಆಗಸ್ಟ್ 2024, 19:45 IST
ಅಕ್ಷರ ಗಾತ್ರ

ಶಿರಸಿ: 'ಬಿಜೆಪಿ ಸರ್ಕಾರದಲ್ಲಿ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನು ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡಿದ್ದು ಎಷ್ಟು ಸತ್ಯವೋ, ಅವರನ್ನು ಮುಖ್ಯಮಂತ್ರಿ ಆಗಿಸುವಲ್ಲಿ ನನ್ನ ಕೊಡುಗೆ ಇದ್ದುದು ಕೂಡ ಅಷ್ಟೇ ಸತ್ಯ. ಅದಕ್ಕೆ ಬಿಜೆಪಿಯವರು ನನ್ನ ನೈತಿಕತೆ ಪ್ರಶ್ನಿಸುವಂತಿಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.

‘ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಯಾರು ಕಾರಣ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಬಿಜೆಪಿಯವರು ಈಗ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ನಾವು ಬಿಜೆಪಿಗೆ ವಲಸೆ ಬರದಿದ್ದರೆ, ಯಾರು ಮುಖ್ಯಮಂತ್ರಿ ಆಗುತ್ತಿದ್ದರು? ಯಾವ ಪಕ್ಷ ಅಧಿಕಾರದಲ್ಲಿ ಇರುತ್ತಿತ್ತು ಎಂಬುದು ಬಿಜೆಪಿಯವರಿಗೆ ಗೊತ್ತಿಲ್ಲವೇ? ಮಾಜಿ ಶಾಸಕಿ ರೂಪಾಲಿ ನಾಯ್ಕ ಬಾಯಿಗೆ ಬಂದಂತೆ ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಸಂಸ್ಕಾರ, ಸಂಸ್ಕೃತಿ ಇಲ್ಲದ ಅವರ ಹೇಳಿಕೆಗೆ ನಾನು ಯಾವ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT