ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು: ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ

Published 27 ಮಾರ್ಚ್ 2024, 15:29 IST
Last Updated 27 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಯಲ್ಲಾಪುರ: ‘ಬಿಜೆಪಿ ಬಗೆಗಿನ ವಿಶ್ವಾಸ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಚಟುವಟಿಕೆಯ ಕುರಿತ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ’ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನನ್ನನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ ದಿನದಿಂದಲೂ ವಿವಿಧ ರೀತಿಯ ಸಂಪರ್ಕ ಚಟುವಟಿಕೆ ನಡೆಸಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಲದ ಬಿಜೆಪಿಯ ಗೆಲುವಿಗೆ ಜೆಡಿಎಸ್ ಜೊತೆಗಿನ ಮೈತ್ರಿಯೂ ಅನುಕೂಲ ಒದಗಿಸಲಿದೆ’ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಲೋಕಸಭಾ ಕ್ಷೇತ್ರದ ಪ್ರಭಾರ ಭಾರತಿ ಜಂಬಗಿ, ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಜಿಲ್ಲಾ ಘಟಕ ಅಧ್ಯಕ್ಷ ಎನ್.ಎಸ್. ಹೆಗಡೆ, ಮಾಧ್ಯಮ ಪ್ರಕೋಷ್ಟದ ಸದಾನಂದ ಭಟ್, ಕೆ.ಟಿ. ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT