ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಿಂದಲೇ ಸಂಕಲ್ಪ ಯಾತ್ರೆ ಆರಂಭ: ನಳಿನ್‌ಕುಮಾರ್ ಕಟೀಲ್

ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿಕೆ
Last Updated 7 ಫೆಬ್ರವರಿ 2023, 16:29 IST
ಅಕ್ಷರ ಗಾತ್ರ

ಭಟ್ಕಳ: ‘ಭಾರತ್ ಜೋಡೊ ಯಾತ್ರೆ ಆರಂಭಿಸಿದ್ದು ರಾಹುಲ್ ಗಾಂಧಿ. ಆದರೆ ವಾಸ್ತವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರ ತನಕ ಭಾರತವನ್ನು ಜೋಡಿಸಿದವರು ಪ್ರಧಾನ ಮಂತ್ರಿ ನರೇಂದ್ರ ಮೋದಿ’ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಸೋಮವಾರ ಶಿರಾಲಿ ಜನತಾ ವಿದ್ಯಾಲಯದಲ್ಲಿ ನಡೆದ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಕರಾವಳಿಯಲ್ಲಿ ಬಿಜೆಪಿ ಅರಳಲು ಪ್ರೇರಣೆ ನೀಡಿದ್ದು ಭಟ್ಕಳ ಕ್ಷೇತ್ರ. ಹಾಗಾಗಿ ಭಟ್ಕಳದಿಂದಲೇ ಪ್ರಥಮ ಬಿಜೆಪಿ ಸಮಾವೇಶ ನಡೆಸಿ ಕರಾವಳಿಯಲ್ಲಿ ಸಂಕಲ್ಪ ಯಾತ್ರೆ ಆರಂಭಿಸಲಾಗುವುದು’ ಎಂದರು.

‘ಭಟ್ಕಳದಲ್ಲಿ ಶಾಂತಿ ನೆಲೆಯೂರಲು ಕಾಂಗ್ರೆಸ್‌ನ ತುಷ್ಟಿರಾಜಕಾರಣ ಅವಕಾಶ ಮಾಡಿಕೊಡುತ್ತಿಲ್ಲ. ಬಿಜೆಪಿ ಆಡಳಿತದಲ್ಲಿ ಕಂಡು ಕೇಳಯರಿದ ಅಭಿವೃದ್ಧಿ ಆಗಿದೆ. ಭಟ್ಕಳ ಶಾಸಕರು ₹1,300 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ’ ಎಂದರು.

‘ದೇಶದಲ್ಲಿ ಪರಿವರ್ತನೆಯಾಗುತ್ತಿದೆ. ಪೇಜ್ ಪ್ರಮುಖರ ಸಹಾಯದಿಂದ ಬಿಜೆಪಿ ಗುಜರಾತಿನಲ್ಲಿ 7ನೇ ಬಾರಿಗೆ ಅಧಿಕಾರ ಹಿಡಿದಿದೆ. ರಾಜ್ಯದಲ್ಲೂ ಅದೇ ಮಾದರಿ ಅನುಸರಿಸಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮೂರು ತುಂಡುಗಳಾಗಿವೆ. ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಂದ ರಾಜ್ಯ ಕಾರ್ಯಕಾರಣಿ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್‌ನಲ್ಲಿ ಕೆಲಸ ಮಾಡಲು ಕಾರ್ಯಕರ್ತರ ತಂಡ ಇಲ್ಲ’ ಎಂದು ವ್ಯಂಗ್ಯವಾಡಿದರು.

ರಾಜ್ಯ ಪ್ರವಾಸ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಭಟ್ಕಳದಲ್ಲಿ ಒಂದು ಬೂತ್ ಮಟ್ಟದ ಸಮಾವೇಶ ನಡೆಸುವ ಸಾಮರ್ಥ್ಯ ಕೂಡ ಇಲ್ಲ ಎಂದು ಟೀಕಿಸಿದರು.

‘ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದೆ. ಆದರೆ ಕಾಂಗ್ರೆಸ್ ನಾಯಕರೇ ಹಲವು ಹಗರಣದಲ್ಲಿ ಸಿಲುಕಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಆಪ್ತ ಕೆಂಪಯ್ಯ ಸಿಕ್ಕಿಬಿದಿದ್ದಾರೆ. ಸಿದ್ದರಾಮಯ್ಯ ಜೈಲಿಗೆ ಹೋಗುವ ದಿನ ದೂರ ಇಲ್ಲ’ ಎಂದರು.

ಶಾಸಕ ಸುನೀಲ ನಾಯ್ಕ ಮಾತನಾಡಿ, ತಾಲ್ಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕೆಲಸದ ಬಗ್ಗೆ ತಿಳಿಸಿದರು. ರಾಜ್ಯ ಬಿಜೆಪಿ ಘಟಕ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಜಿಲ್ಲಾ ಘಟಕ ಅಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಪ್ರಮುಖರಾದ ಭಾರತಿ ಜಂಬೆ, ಎನ್.ಎಸ್ ಹೆಗಡೆ, ಪ್ರಸನ್ನ ಕೆರಕೆ, ಚಂದ್ರು ಎಸಳೆ, ಗುರುಪ್ರಸಾದ ಹೆಗಡೆ, ರವಿ ನಾಯ್ಕ, ಸುಬ್ರಾಯ ದೇವಾಡಿಗ, ರಾಜೇಶ ಭಂಡಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT