ಸಿದ್ದಾಪುರ (ಉತ್ತರ ಕನ್ನಡ): ತಾಲ್ಲೂಕಿನ ದೊಡ್ಮನೆ ಕುಟುಂಬದ ಗಣೇಶ ಹೆಗಡೆ ಅವರ ಪತ್ನಿ ಲಕ್ಷ್ಮೀದೇವಿ ಹೆಗಡೆ (100) ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

ಸಿದ್ದಾಪುರ ತಾಲ್ಲೂಕಿನಲ್ಲಿ ಶಿಕ್ಷಣ ಸಂಸ್ಥೆಗಳು, ಸಹಕಾರಿ ಸಂಘಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿ ತಾಲ್ಲೂಕಿನ ಅಭಿವೃದ್ಧಿಯ ಹರಿಕಾರರೆನಿಸಿದ್ದ ಗಣೇಶ ನಾರಾಯಣ ಹೆಗಡೆ ಅವರ ಧರ್ಮಪತ್ನಿಯಾಗಿದ್ದ ಲಕ್ಷ್ಮೀದೇವಿ ಪತಿಯ ಪ್ರತಿಯೊಂದು ಸತ್ಕಾರ್ಯದಲ್ಲಿಯೂ ಬೆನ್ನೆಲುಬಾಗಿ ನಿಂತಿದ್ದರು.

ಮಾಜಿಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಶಿಕ್ಷಣಕ್ಕಾಗಿ ಸೌಲಭ್ಯ ಕಲ್ಪಿಸಿ ಅವರು ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಮಾಡುವಲ್ಲಿ ಅತ್ತಿಗೆ ಲಕ್ಷ್ಮೀದೇವಿಯವರ ಪಾತ್ರ ಪ್ರಮುಖವಾಗಿತ್ತು. ಹಲವಾರು ಧಾರ್ಮಿಕ ಗ್ರಂಥಗಳನ್ನು ಓದಿ ಅರ್ಥೈಸಿಕೊಂಡಿದ್ದ ಅವರು ತಮ್ಮ ಅನೇಕ ಲೇಖನಗಳ ಮೂಲಕವೂ ಗಮನ ಸೆಳೆದಿದ್ದರು.

ಮೃತರು ಶಿಕ್ಷಣ ಪ್ರಸಾರಕ ಸಮಿತಿಯ ಮುಖ್ಯಸ್ಥ ವಿನಾಯಕರಾವ ಹೆಗಡೆ, ಉದ್ಯಮಿ ರಾಮನಂದನ ಹೆಗಡೆ ಹುಬ್ಬಳ್ಳಿ, ಸಿದ್ದಾಪುರದ ಶೃಂಗೇರಿ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ಸೇರಿದಂತೆ ಮೂವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಮಿಮ್ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಜಿಲ್ಲೆ ಹಾಗೂ ಹೊರಜಿಲ್ಲೆಗಳ ಅನೇಕ ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಶಿಕ್ಷಣ ಪ್ರಸಾರಕ ಸಮಿತಿಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮೃತರ ಗೌರವಾರ್ಥ ಇಂದು ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.