ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುವತಿಗೆ ವಂಚನೆ ಆರೋಪ: ಪೊಲೀಸ್‌ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ

Published 24 ಜೂನ್ 2024, 7:05 IST
Last Updated 24 ಜೂನ್ 2024, 7:05 IST
ಅಕ್ಷರ ಗಾತ್ರ

ಮುಂಡಗೋಡ: ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಯುವತಿಯನ್ನು ನಂಬಿಸಿ, ಅವರಿಂದ ₹18 ಲಕ್ಷ ಪಡೆದು ವಂಚಿಸಿದ ಆರೋಪದ ಮೇಲೆ ಇಲ್ಲಿನ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಗಿರೀಶ ಎಸ್.ಎಂ. ಎಂಬುವರ ಮೇಲೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಾನ್‌ಸ್ಟೆಬಲ್ ಗಿರೀಶ ಅವರು, ಅದೇ ತಾಲ್ಲೂಕಿನ ಯುವತಿಯ ಕಡೆಯಿಂದ ಕಳೆದ ಐದು‌ ವರ್ಷಗಳ ಅವಧಿಯಲ್ಲಿ ಒಟ್ಟು ₹18 ಲಕ್ಷ ಪಡೆದು, ಅದಕ್ಕೆ ಪ್ರತಿಯಾಗಿ ಚೆಕ್‌ಗಳನ್ನು ನೀಡಿದ್ದರಂತೆ. ಆದರೆ, ಮರಳಿ ಹಣವನ್ನು ನೀಡದೆ ಮೋಸ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ.

'ಯುವತಿ ನೀಡಿದ ದೂರು ಆಧರಿಸಿ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಸಿಪಿಐ ರಂಗನಾಥ ನೀಲಮ್ಮನವರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT