ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಷಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆ.9ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ 12 ವರ್ಷದೊಳಗಿನ ಚಿಕ್ಕ ಮಕ್ಕಳ ಆರೋಗ್ಯ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ತಿಳಿಸಿದರು.

ಕಾಗದ ಕಾರ್ಖಾನೆಯ ಸ್ಪೋರ್ಟ್ಸ್ ವಿಭಾಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ವೈದ್ಯ ಡಾ. ರಾಜನ್ ದೇಶಪಾಂಡೆ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ 12 ತಜ್ಞ ವೈದ್ಯರು ಭಾಗವಹಿಸಿ, ಆರೋಗ್ಯ ತಪಾಸಣೆ ನಡೆಸಿ, ಉಚಿತವಾಗಿ ಔಷಧಿ ನೀಡುವರು.

ದಾಂಡೇಲಿ ಹಾಗೂ ಸುತ್ತಮುತ್ತಲ ಪ್ರದೇಶದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಂದು ಬೆಳಿಗ್ಗೆ 8ಕ್ಕೆ ರಂಗನಾಥ ಸಭಾಭವನದ ಆವರಣದಲ್ಲಿ ಹೆಸರನ್ನು ನೋಂದಾಯಿಸಬಹುದು. ನಗರದ ಸುತ್ತಮುತ್ತಲ ಗ್ರಾಮೀಣ ಭಾಗದ ಜನರಿಗೆ ವಾಹನ ಹಾಗೂ ಊಟ, ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ.

ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಜೆ.ಆರ್, ನಗರಸಭೆ ಸದಸ್ಯ ಮೋಹನ ಹಲವಾಯಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.