ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ತಾಕುಲ | ಎಸ್‍ಐ ಅಮಾನತುಗೊಳಿಸಲು ಗ್ರಾ.ಪಂ ಸದಸ್ಯರ ಆಗ್ರಹ

Published : 19 ಸೆಪ್ಟೆಂಬರ್ 2024, 15:23 IST
Last Updated : 19 ಸೆಪ್ಟೆಂಬರ್ 2024, 15:23 IST
ಫಾಲೋ ಮಾಡಿ
Comments

ಕಾರವಾರ: ತಾಲ್ಲೂಕಿನ ಚಿತ್ತಾಕುಲ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಮಹಾಂತೇಶ ವಾಲ್ಮೀಕಿ ಅವರನ್ನು ಅಮಾನತುಗೊಳಿಸಿ, ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಚಿತ್ತಾಕುಲ ಗ್ರಾಮ ಪಂಚಾಯಿತಿ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ಸದಾಶಿವಗಡದಲ್ಲಿ ಮಂಗಳವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಎಸ್‍ಐ ಅನಗತ್ಯವಾಗಿ ಜನರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಕೆಲವರಿಗೆ ನಿಂದಿಸಿ, ಅನಗತ್ಯ ತೊಂದರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ದಿಲೀಪ ಗಜಿನಕರ ಅವರನ್ನು ಥಳಿಸಿ ಅವಮಾನಿಸಿದ್ದಾರೆ’ ಎಂದು ದೂರಿದರು.

‘ಎಸ್‍ಐ ಅನಗತ್ಯವಾಗಿ ಕೆಲವರ ವಿರುದ್ಧ ವೈಯಕ್ತಿಕ ಹಿತಾಸಕ್ತಿಯಿಂದ ಬೆದರಿಸುವ ಕೆಲಸ ಮಾಡುತ್ತಿರುವ ಆರೋಪಗಳಿವೆ. ಅವರನ್ನು ಇದೇ ಠಾಣೆಯಲ್ಲಿ ಮುಂದುವರೆಸಿದರೆ ಪಕ್ಷಪಾತ ಧೋರಣೆಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಇದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮತ್ತಷ್ಟು ಹೆಚ್ಚಲು ಕಾರಣವಾಗಬಹುದು. ಹೀಗಾಗಿ ಅವರನ್ನು ಅಮಾನತುಗೊಳಿಸುವ ಜತೆಗೆ ಚಿತ್ತಾಕುಲ ಠಾಣೆಯಿಂದ ವರ್ಗಾವಣೆಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೂರಜ ದೇಸಾಯಿ, ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT