ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕಸಿತ ಭಾರತ– ಅಸಹಕಾರಕ್ಕೆ ಸೂಚನೆ: ಕೋಟ ಆರೋಪ

Published 4 ಜನವರಿ 2024, 23:42 IST
Last Updated 4 ಜನವರಿ 2024, 23:42 IST
ಅಕ್ಷರ ಗಾತ್ರ

ಕಾರವಾರ: ‘ವಿಕಸಿತ ಭಾರತ ಕಾರ್ಯಕ್ರಮದಡಿ ಪ್ರತಿ ಗ್ರಾಮ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನಡೆಸುವ ಕಾರ್ಯಕ್ಕೆ ಸಹಕರಿಸದಂತೆ ಮುಖ್ಯಮಂತ್ರಿ ಕಚೇರಿಯಿಂದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಲಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

‘ಜನವರಿ 22ರಂದು ಗೋಧ್ರಾ ಮಾದರಿಯ ಗಲಭೆ ನಡೆಯಬಹುದು ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಅವಘಡಗಳು ನಡೆದರೆ ಅದಕ್ಕೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ರಾಜ್ಯ ಸಚಿವ ಸಂಪುಟದ ಕೆಲ ಸದಸ್ಯರ ಒಡೆತನದ ಖಾಸಗಿ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ. ಆದರೆ, ಇದೇ ಕಾಂಗ್ರೆಸ್ ನಾಯಕರು ಬಡವರ ಮಕ್ಕಳು ಕಲಿಯುವ ಶಾಲೆಗೆ ಹಳೆಯ ಶಿಕ್ಷಣ ನೀತಿ ಜಾರಿಮಾಡಲು ಮುಂದಾಗಿರುವುದು ಅವರ ಇಬ್ಬಂದಿತನದ ನೀತಿ ತೋರಿಸುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT