ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಅಂಜಲಿ ಪರ ಸಿ.ಎಂ ಮತಯಾಚನೆ ಮೇ. 3ರಂದು

Published 29 ಏಪ್ರಿಲ್ 2024, 14:26 IST
Last Updated 29 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ಮುಂಡಗೋಡ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್‌ ಅವರ ಪರವಾಗಿ ಮತಯಾಚನೆ ಮಾಡುವ ಹಿನ್ನೆಲೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಮೇ. 3ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ ಹೇಳಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆ, ಇಲ್ಲಿನ ತಾಲ್ಲೂಕು ಕ್ರೀಡಾಂಗಣಕ್ಕೆ ಸೋಮವಾರ ಭೇಟಿ ನೀಡಿದ ಅವರು, ಸಿಪಿಐ ರಂಗನಾಥ ನೀಲಮ್ಮನವರ ಅವರೊಂದಿಗೆ ಸಮಾವೇಶ ನಡೆಯುವ ಸ್ಥಳ ಪರಿಶೀಲಿಸಿದರು. ವೇದಿಕೆ ನಿರ್ಮಾಣ, ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ, ಆಸನಗಳ ಸಂಖ್ಯೆ ಇನ್ನಿತರ ಮಾಹಿತಿ ಪಡೆದರು.

‘ಯಲ್ಲಾಪುರ ಕ್ಷೇತ್ರದ 15 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆ ಹಾಗೂ ರಾಜ್ಯದ ಕಾಂಗ್ರೆಸ್‌ ಹಿರಿಯ ಮುಖಂಡರು, ಸಚಿವರು ಭಾಗವಹಿಸಲಿದ್ದಾರೆ. ಬೂತ್‌ಮಟ್ಟದಿಂದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಸಮಾವೇಶಕ್ಕೆ ಬರುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಪರ ವಾತಾವರಣವಿದ್ದು, ಮುಖ್ಯಮಂತ್ರಿ ಕಾರ್ಯಕ್ರಮದಿಂದ, ಪಕ್ಷಕ್ಕೆ ಮತ್ತಷ್ಟು ಅನುಕೂಲವಾಗಲಿದೆ. ಕಾಂಗ್ರೆಸ್‌ ಪಕ್ಷದ ಮೇಲೆ ಭರವಸೆ ಇಟ್ಟಿರುವ ಎಲ್ಲರೂ ಈ ಸಮಾವೇಶದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ’ ಎಂದು ಜ್ಞಾನೇಶ್ವರ ಹೇಳಿದರು.

ಕೃಷ್ಣ ಹಿರೇಹಳ್ಳಿ, ಬಸವರಾಜ ಸಂಗಮೇಶ್ವರ, ರಜಾಖಾನ ಪಠಾಣ, ಧರ್ಮರಾಜ ನಡಿಗೇರ, ಗೋಪಾಲ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT