
ಬಿಜೆಪಿ ಸರ್ಕಾರ ಇದ್ದಾಗ ಕಾರವಾರ ಹಾಗೂ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲಿ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿತ್ತು. ಆದರೆ ಈ ಬಜೆಟ್‍ನಲ್ಲಿ ಘೋಷಣೆ ಒಂದೇ ಆಸ್ಪತ್ರೆಗೆ ಸೀಮಿತವಾಗಿದೆರೂಪಾಲಿ ನಾಯ್ಕ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ
ಜಿಲ್ಲೆಗೆ ಪೂರಕ ಘೋಷಣೆಗಳು
ಬಿಜೆಪಿ ಸರ್ಕಾರ ಇದ್ದಾಗ ಕಾರವಾರ ಹಾಗೂ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲಿ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿತ್ತು. ಆದರೆ ಈ ಬಜೆಟ್‍ನಲ್ಲಿ ಘೋಷಣೆ ಒಂದೇ ಆಸ್ಪತ್ರೆಗೆ ಸೀಮಿತವಾಗಿದೆ ರೂಪಾಲಿ ನಾಯ್ಕ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ
ಪ್ರತಿಕ್ರಿಯೆಗಳು
ಬಜೆಟ್ ದೂರದೃಷ್ಟಿಯೊಂದಿಗೆ ರೂಪುಗೊಂಡಿದ್ದು, ಆರ್ಥಿಕ ಶಿಸ್ತನ್ನು ಕಾಯ್ದುಕೊಂಡು ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ. ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಪ್ರವಾಸೋದ್ಯಮ, ಮೂಲಭೂತ ಕ್ಷೇತ್ರಗಳಿಗೆ ಆದ್ಯತೆ ಸಿಕ್ಕಿದೆ.ಆರ್.ವಿ.ದೇಶಪಾಂಡೆ, ಹಳಿಯಾಳ ಶಾಸಕ
ರೈತರ ಹಿತಾಸಕ್ತಿ ಕಾಯುವ ಜೊತೆಗೆ ಮೀನುಗಾರಿಕೆ, ಸಹಕಾರ, ಮೂಲಸೌಲಭ್ಯ ಕ್ಷೇತ್ರಕ್ಕೂ ಹೆಚ್ಚಿನ ಯೋಜನೆ ಘೋಷಿಸಿರುವುದು ಎಲ್ಲ ವರ್ಗಗಳ ಜನರಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಉತ್ತಮ ಬಜೆಟ್ ಮಂಡಿಸಿದ್ದಾರೆ.ಶಿವರಾಮ ಹೆಬ್ಬಾರ, ಯಲ್ಲಾಪುರ ಶಾಸಕ
ಗ್ಯಾರಂಟಿ ಯೋಜನೆಗೆ ಅನುದಾನ ಮೀಸಲಿಟ್ಟು ಅಭಿವೃದ್ಧಿ ಕಡೆಗಣಿಸಲಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ ಕ್ಷೇತ್ರಕ್ಕೆ ಹೇಳಿಕೊಳ್ಳುವ ಯಾವ ಕೊಡುಗೆಯೂ ಇಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ಘೋಷಣೆಯಾಗಿದ್ದು ಬಿಟ್ಟರೆ ಇರುವ ಆಸ್ಪತ್ರೆಗಳಿಗೆ ಸೌಕರ್ಯ ಸಿಕ್ಕಿಲ್ಲ.ಗಣಪತಿ ಉಳ್ವೇಕರ, ವಿಧಾನ ಪರಿಷತ್ ಸದಸ್ಯ
ಈಚಿನ ವರ್ಷಗಳಂತೆ ಈ ಬಾರಿಯೂ ಕೊರತೆ ಬಜೆಟ್ ಮಂಡನೆಯಾಗಿದೆ. ₹45 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ. ಆದರೆ ಅದರ ಅರ್ಧದಷ್ಟನ್ನೂ ಸಹ ಶಿಕ್ಷಣ ಮತ್ತು ಸಂಶೋಧನೆಗೆ ನೀಡಲಾಗಿಲ್ಲ. ಅಭಿವೃದ್ಧಿ ಕೆಸಲಗಳಿಗೆ ನೀಡಬೇಕಾದ ಅನುದಾನವನ್ನು ಕಳೆದ ಎರಡು ವರ್ಷಗಳಿಂದ ಸರಿಯಾಗಿ ನೀಡುತ್ತಿಲ್ಲ. ಗ್ರಾಮೀಣ ಭಾಗಗಳ ಅಭಿವೃದ್ಧಿ ಮರೀಚಿಕೆಯಾಗಿದೆ.ಸತೀಶ ಭಟ್ಟ, ಮುತ್ತಿಗೆ, ಬ್ಯಾಂಕ್ ಉದ್ಯೋಗಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.