ಕಾರವಾರ: ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ಈ ಅವಧಿಯಲ್ಲಿ ಮೂರನೆ ಬಾರಿಗೆ ಜಿಲ್ಲೆಗೆ ಭಾನುವಾರ ಭೇಟಿ ನೀಡುತ್ತಿದ್ದಾರೆ. ಈ ಬಾರಿ ಹಲವು ‘ಬೇಡಿಕೆ’ಗಳ ಜೊತೆಗೆ ‘ಬೇಡ’ಗಳ ಪಟ್ಟಿ ಅವರ ಮುಂದಿಡಲು ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ.

ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಸುಪರ್ದಿಯ 450 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ಕಟ್ಟಡ ಉದ್ಘಾಟಿಸುವುದು ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯಕ್ರಮದಲ್ಲೊಂದು. ಹೀಗೆ ಉದ್ಘಾಟಿಸುವ ಆಸ್ಪತ್ರೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಸೌಕರ್ಯವಿದೆ ಎಂಬುದಾಗಿ ಶಾಸಕ ಸತೀಶ ಸೈಲ್ ಪ್ರತಿಪಾದಿಸುತ್ತಿದ್ದಾರೆ.

ಆದರೆ, ಆಸ್ಪತ್ರೆಯಲ್ಲಿ ಇದುವರೆಗೂ ಅಗತ್ಯ ಯಂತ್ರೋಪಕರಣಗಳ ಅಳವಡಿಕೆ ಆಗಿಲ್ಲ. ಕ್ಯಾನ್ಸರ್ ಚಿಕಿತ್ಸಾ ವಿಭಾಗ ನಿರ್ಮಾಣ ಹಂತದಲ್ಲಿದ್ದರೂ ಈವರೆಗೆ ರೇಡಿಯಾಜಲಿಸ್ಟ್ ಹುದ್ದೆ ಭರ್ತಿಯಾಗಿಲ್ಲ. ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹೃದ್ರೋಗ ತಜ್ಞರು ಸೇರಿದಂತೆ ನರರೋಗ ತಜ್ಞರ ಹುದ್ದೆ ಇಲ್ಲಿಲ್ಲ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗೆ ನೆರೆ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯತೆ ಇನ್ನೂ ಮುಂದುವರಿದಿದೆ ಎಂಬುದು ಜನರ ಆರೋಪ.

‘ಮೂರು ದಿನಗಳ ಹಿಂದೆ ಮಾಜಾಳಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ಕರೆಮಾಡಿದರೂ ಆಂಬುಲೆನ್ಸ್ ಬರಲಿಲ್ಲ. ಆಸ್ಪತ್ರೆಗೆ ಕರೆದೊಯ್ದರೆ ಗೋವಾದ ಬಾಂಬೋಲಿಂಗೆ ಸಾಗಹಾಕಿದರು. ಇಂತಹ ಹತ್ತಾರು ಪ್ರಕರಣ ದಿನವೂ ನಡೆಯುತ್ತಿದೆ. ಮಲ್ಟಿ ಸ್ಪೆಷಾಲಿಟಿ, ಸೂಪರ್ ಸ್ಪೆಷಾಲಿಟಿ ಕೇವಲ ಘೋಷಣೆಗೆ ಸೀಮಿತವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಕಿಶನ್ ಕಾಂಬ್ಳೆ ದೂರಿದರು.

ಆರೋಗ್ಯ ಕ್ಷೇತ್ರದ ಸುಧಾರಣೆಯ ಜೊತೆಗೆ ಜಿಲ್ಲೆಯಲ್ಲಿ ಅಡಿಕೆಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರದಿಂದ ದೊಡ್ಡ ಮೊತ್ತದ ಪರಿಹಾರದ ನಿರೀಕ್ಷೆ ಇದೆ. ಗಡಿಭಾಗವಾಗಿರುವ ಕಾರಣಕ್ಕೆ ಕೈಗಾರಿಕೆ ಸ್ಥಾಪನೆ ಸೇರಿದಂತೆ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವ ಜೊತೆಗೆ, ಭೂಕುಸಿತ ತಡೆ ಪರಿಹಾರಕ್ಕೆ ಕನಿಷ್ಠ ₹100 ಕೋಟಿ ಮಂಜೂರಿಸಬೇಕೆಂಬ ಬೇಡಿಕೆಗೆ ಮನ್ನಣೆ ಸಿಗಬಹುದು ಎಂಬ ನಿರೀಕ್ಷೆ ಇದೆ.

ಇವೆಲ್ಲದರ ನಡುವೆ ಸದ್ಯ ಜಿಲ್ಲೆಗೆ ಭಾರಿ ಯೋಜನೆಗಳ ಹೇರಿಕೆಯಿಂದ ಮುಕ್ತಗೊಳಿಸಲು ಒತ್ತಡ ಹೆಚ್ಚುತ್ತಿದೆ. ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆ ರದ್ದುಪಡಿಸುವ ಜೊತೆಗೆ ಶರಾವತಿ ಪಂಪ್ಡ್ ಸ್ಟೋರೇಜ್, ಕೇಣಿ ವಾಣಿಜ್ಯ ಬಂದರು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಲು ಹೋರಾಟಗಾರರು ಸಜ್ಜಾಗಿದ್ದಾರೆ.

ಭಿಗಿ ಭದ್ರತೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಕೋಲಾ ಮತ್ತು ಕಾರವಾರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು ಕಾರ್ಯಕ್ರಮ ನಡೆಯವ ಸ್ಥಳದ ಜೊತೆಗೆ ಅವರು ಸಾಗುವ ಮಾರ್ಗಗಳಲ್ಲಿ ಭಿಗಿ ಭದ್ರತೆ ಕೈಗೊಳ್ಳಲಾಗಿದೆ. 900 ಮಂದಿ ಪೊಲೀಸ್ ಅಧಿಕಾರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರವಾರ ನಗರದ ಮಾಲಾದೇವಿ ಮೈದಾನದಲ್ಲಿನ ಹೆಲಿಪ್ಯಾಡ್ನಿಂದ ಕ್ರಿಮ್ಸ್ ಆವರಣಕ್ಕೆ ಮುಖ್ಯಮಂತ್ರಿ ಸಾಗುವ ಮಾರ್ಗದುದ್ದಕ್ಕೂ ಗೂಡಂಗಡಿಗಳನ್ನು ತೆರವುಗೊಳಿಸಲಾಗಿದೆ. ಈ ಮಾರ್ಗದಲ್ಲಿ ಸುರಕ್ಷತೆ ಮೇಲೆ ಪೊಲೀಸರು ಅಣಕು ಸಂಚಾರದ ಮೂಲಕ ಭದ್ರತೆ ಪರಿಶೀಲಿಸುತ್ತಿದ್ದಾರೆ.

ಏನೇನು ಕಾರ್ಯಕ್ರಮಗಳು?

ಬೆಳಿಗ್ಗೆ 11.50ಕ್ಕೆ ಅಂಕೋಲಾ ತಾಲ್ಲೂಕಿನ ಮಂಜುಗುಣಿ ಗ್ರಾಮ ಗಂಗಾವಳಿ–ಮಂಜಗುಣಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಅಲ್ಲಿಂದ 12.45ಕ್ಕೆ ಕಾರವಾರಕ್ಕೆ ಬಂದಿಳಿಯುವ ಅವರು ಕ್ರಿಮ್ಸ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93ರಲ್ಲಿ ನಿರ್ಮಾಣಗೊಂಡಿರುವ ಸೇತುವೆ ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲ್ಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ ಕಾರವಾರದಿಂದ ಮರಳಲಿದ್ದಾರೆ.