ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ದೂರು ದಾಖಲು

Published : 30 ಜುಲೈ 2023, 14:54 IST
Last Updated : 30 ಜುಲೈ 2023, 14:54 IST
ಫಾಲೋ ಮಾಡಿ
Comments

ಭಟ್ಕಳ: ದೇಶದ ಪ್ರಧಾನಿಮಂತ್ರಿ ನರೇಂದ್ರ ಮೋದಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಗೂ ಮೇಸೆಜ್‌ಗಳನ್ನು ಹಾಕಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಶನಿವಾರ ಭಟ್ಕಳ ಬಿಜೆಪಿ ಮಂಡಳದ ವತಿಯಿಂದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹೊನ್ನಾವರ ಫ್ರೆಂಡ್ಸ್‌ ಗ್ರೂಪ್ ಇನ್ ಎಂಎಸ್‌ವಿ ಮೀಡಿಯಾ ಮತ್ತು ಯಂಗ್ ಒನ್ ಇಂಡಿಯಾ ಇದರ ವಿರುದ್ದ ಬಿಜೆಪಿ ಮಂಡಲ ಅಧ್ಯಕ್ಷರು ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿ ಮಾನಹಾನಿ, ತೇಜೋವಧೆಯಂತಹ ಅವಮಾನಕರ ಕೃತ್ಯ ನಡೆಸುವುದರಿಂದ ಬಿಜೆಪಿ ಮತ್ತು ಪ್ರಧಾನಮಂತ್ರಿ ಮೋದಿ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ ಎಂದರು.

ದೇಶದ ಪ್ರಧಾನಮಂತ್ರಿ ವಿರುದ್ದ ಇಂತಹ ಅವಮಾನಕರ ಕೃತ್ಯ ನಡೆಸುವ ವ್ಯಕ್ತಿಗಳ ಮೇಲೆ ಸೈಬರ್ ಕ್ರೈಂ ಅಡಿಯಲ್ಲಿ ಸೂಕ್ತ ಕಾನೂನ ರೀತಿಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

ಸುಬ್ರಾಯ ದೇವಡಿಗ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶಿವಾನಿ ಶಾಂತರಾಮ ಭಟ್ಕಳ, ಮಾಜಿ ಸೈನಿಕರ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಭಾಸ್ಕರ ದೈಮನೆ, ಮಂಡಲದ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ವೆಂಕಟೇಶ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT