ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಸತೀಶ ಸೈಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Published 23 ಸೆಪ್ಟೆಂಬರ್ 2023, 3:28 IST
Last Updated 23 ಸೆಪ್ಟೆಂಬರ್ 2023, 3:28 IST
ಅಕ್ಷರ ಗಾತ್ರ

ಕಾರವಾರ: ‘ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ ಪ್ರಮಾಣಪತ್ರದಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ’ ಎಂದು ಬೆಂಗಳೂರಿನ ಶೇಷಾದ್ರಿಪುರಂ ನಿವಾಸಿ ಶ್ರೀನಿವಾಸ್ ಎಂಬುವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೆಪ್ಟೆಂಬರ್ 20ರಂದು ಲಿಖಿತ ದೂರು ಸಲ್ಲಿಸಿದ್ದಾರೆ.

‘ಸತೀಶ ಸೈಲ್ ಮತ್ತು ಅವರ ಪತ್ನಿ ಕಲ್ಪನಾ ಒಡೆತನದಲ್ಲಿರುವ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿ. ಕಂಪನಿಯ ಕುರಿತು ಯಾವುದೇ ಮಾಹಿತಿ ಉಲ್ಲೇಖಿಸಿಲ್ಲ. ಕಂಪನಿಯ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್‍ನ ಮುಂಬೈ ವರ್ಲಿ ಶಾಖೆಯಲ್ಲಿ ಪಡೆದ ₹63.90 ಕೋಟಿ ಸಾಲವನ್ನೂ ಉಲ್ಲೇಖಿಸಿಲ್ಲ’ ಎಂದು ದೂರಿದ್ದಾರೆ.

‘ರಾಜ್ಯ ಸರ್ಕಾರದಿಂದ 30 ವರ್ಷ ಅವಧಿಗೆ ಲೀಸ್ ಪಡೆದ ಬಂದರು ಇಲಾಖೆಗೆ ಸೇರಿದ ಜಟ್ಟಿಯನ್ನು ಅಡವಿಟ್ಟು ಬ್ಯಾಂಕ್ ಸಾಲ ಪಡೆದಿದ್ದಾರೆ. ಇದು ನಿಯಮಕ್ಕೆ ವಿರುದ್ಧವಾಗಿದೆ. ಇದನ್ನೂ ಪ್ರಮಾಣಪತ್ರದಲ್ಲಿ ತೋರಿಸಿಲ್ಲ. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಯ ಹೆಸರಿನಲ್ಲಿ ಹೊರರಾಜ್ಯದ ಕೆಲ ಬ್ಯಾಂಕ್‍ಗಳಲ್ಲಿ ಪಡೆದ ಸಾಲದ ಮಾಹಿತಿಯೂ ನಮೂದಿಸಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT